ಉಡುಪಿ: ಗೋಮಾತೆಯ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಹೇಳಿದರು.
Advertisement
ಉಡುಪಿ ಕೃಷ್ಣಮಠದಲ್ಲಿ ಗೋಪಾಲಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುಪಿ ಮುಖ್ಯಮಂತ್ರಿ ಯೋಗಿ ಅವರ ಜೊತೆ ಚರ್ಚೆ ಮಾಡಿ ಗೋನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಸಾಕಷ್ಟು ಅಧ್ಯಯನ ಮಾಡಿಯೇ ಕಾಯ್ದೆ ಜಾರಿ ಮಾಡಿದ್ದೇವೆ. ಕೆಲವರು ನ್ಯಾಯಾಲಯದಲ್ಲಿ ಪಿಐಎಲ್ ಹಾಕಿದ್ದು, ನ್ಯಾಯಾಲಯದಲ್ಲಿ ತೀರ್ಪು ಶೇಕಡಾ 100 ನಮ್ಮ ಪರ ಬರುತ್ತದೆ. ಗೋಹತ್ಯಾ ನಿಷೇಧ ಕಾಯ್ದೆ ಸಂಪೂರ್ಣ ಜಾರಿಯಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ
Advertisement
Advertisement
ಹೊಸ ಕಾಯ್ದೆ ಬಂದ ನಂತರ 10 ಸಾವಿರ ಗೋವು ರಕ್ಷಿಸಲಾಗಿದ್ದು, 600ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಪೊಲೀಸ್ ಇಲಾಖೆ ಮತ್ತು ಗೃಹ ಸಚಿವರು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ
Advertisement
ಈ ಹಿಂದೆ ಕೇವಲ ಒಂದು ಸಾವಿರ ರೂಪಾಯಿ ದಂಡ ಇತ್ತು. ಭವಿಷ್ಯದಲ್ಲಿ ದಂಡದ ಪ್ರಮಾಣ 50 ಸಾವಿರದಿಂದ 10 ಲಕ್ಷ ರೂಪಾಯಿ ಆಗಲಿದೆ. ತೀರ್ಪು ನಮ್ಮ ಪರವಾಗಿ ಬಂದನಂತರ ಗೋಹತ್ಯೆ ಹೇಗೆ ಆಗುತ್ತೆ ನೋಡೋಣ. ದಂಡದ ಪ್ರಮಾಣ ಹೆಚ್ಚಾದರೆ ಯಾರು ಗೋಹತ್ಯೆ ಮಾಡುತ್ತಾರೆ. ಏಳು ವರ್ಷಗಳ ಜೈಲುವಾಸಕ್ಕೂ ಅವಕಾಶವಿದೆ. ತಾಲೂಕಿಗೆ ಒಂದು ಸುಸಜ್ಜಿತ ಅಂಬುಲೆನ್ಸ್ ನೀಡುತ್ತೇವೆ. ಪ್ರಾಣಿ ಸಹಾಯವಾಣಿ ಕೇಂದ್ರ ಆರಂಭಿಸಿದ್ದೇವೆ ಎಂದು ಆಶ್ವಾಸನೆ ನೀಡಿದರು.
ಕಳೆದ ಮೂರು ತಿಂಗಳಲ್ಲಿ 30,000 ದೂರು ಬಂದಿದೆ. ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತೇವೆ. 50ರಿಂದ 100 ಎಕರೆ ಪ್ರದೇಶದಲ್ಲಿ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಬೆಳಗಾವಿ ಅಧಿವೇಶನ ಮುಗಿದ ನಂತರ 25 ಜಿಲ್ಲೆಗಳಲ್ಲಿ ಗೋಶಾಲೆ ಆರಂಭಿಸಲಾಗುವುದು ಎಂದರು.