ಬೆಂಗಳೂರು: ಜನವರಿ 1ರ ನಸುಕಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ (Namma Metro) ಸಂಚಾರ ಮಾಡಲಿದೆ. ಕೊನೆಯ ನಮ್ಮ ಮೆಟ್ರೋ ಸಂಚಾರ ರಾತ್ರಿ 2 ಗಂಟೆಗೆ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಲ್ಕು ದಿಕ್ಕಿಗೆ ಹೊರಡಲಿದೆ ಎಂದು ಬಿಎಂಆರ್ ಸಿಎಲ್ (Bangalore Metro Rail Corporation Limited) ಎಂ.ಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಹೊಸ ವರ್ಷಾಚರಣೆ (New Year Celebration) ಹಿನ್ನೆಲೆಯಲ್ಲಿ ಬಿಎಂಆರ್ ಸಿಎಲ್ ನಮ್ಮ ಮೆಟ್ರೋ ಅವಧಿಯನ್ನು ವಿಸ್ತರಣೆ ಮಾಡಿದೆ. ಡಿಸೆಂಬರ್ 31 ರಂದು ರಾತ್ರಿ 3 ಗಂಟೆ ಮೆಟ್ರೋ ಸಂಚಾರ ಅವಧಿ ವಿಸ್ತರಿಸಿದೆ. ಇದನ್ನೂ ಓದಿ: ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
ಜನವರಿ 1 ರಂದು ಎಂದಿನಂತೆ 5.30ಕ್ಕೆ ಮೆಟ್ರೋ ಸಂಚಾರ ಆರಂಭವಾಗಲಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಎಂ.ಜಿ ರೋಡ್, ಬೈಯಪ್ಪನಹಳ್ಳಿ ಕಡೆಯಿಂದ ಸಂಚಾರ ಮಾಡುವ ಪ್ರಯಾಣಿಕರು ಮೆಟ್ರೋ ಬಳಕೆ ಮಾಡುವಂತೆ ಇದೇ ವೇಳೆ ಅವರು ಮನವಿ ಮಾಡಿದರು.