ಶ್ರೀನಗರ: ಭಾರತ ಗಿಲ್ಗಿಟ್, ಬಾಲ್ಟಿಸ್ತಾನ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸಂಪೂರ್ಣ ಭಾಗವನ್ನು ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು (POK) ವಶಪಡಿಸಿಕೊಳ್ಳುವ ಸುಳಿವು ನೀಡಿದ್ದಾರೆ.
ಇಂದು ಬುದ್ಗಾಮ್‌ನಲ್ಲಿ ಭಾರತೀಯ ಸೇನೆ ಆಯೋಜಿಸಿದ್ದ 76ನೇ ಪದಾತಿ ದಳದ ದಿನದ ಅಂಗವಾಗಿ ಶೌರ್ಯ ದಿವಸ್ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಸಂಪೂರ್ಣ ಜಮ್ಮು ಮತ್ತು ಕಾಶ್ಮೀರವನ್ನು ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ
ದಾಳಿಕೋರರ ಕ್ರೂರ ದಾಳಿಯಿಂದ ಈ ಭೂಮಿಯನ್ನು ಮುಕ್ತಗೊಳಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಎಲ್ಲಾ ಹುತಾತ್ಮರ ಮುಂದೆ ನಾನು ತಲೆಬಾಗುತ್ತೇನೆ. ಭಾರತ ವಿಭಜನೆಯಾದ ನಂತರ ಪಾಕಿಸ್ತಾನ ತನ್ನ ನಿಜವಾದ ಬಣ್ಣವನ್ನು ತೋರಿಸಿದೆ. ಪಾಕಿಸ್ತಾನ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡುತ್ತದೆ ಎಂದು ನಾವು ಊಹಿಸಿರಲಿಲ್ಲ ಎಂದರು. ಇದನ್ನೂ ಓದಿ: ಈ ಹಿಂದೆ ಪಠ್ಯಪುಸ್ತಕಗಳಲ್ಲಿ ಟಿಪ್ಪು ವೈಭವೀಕರಣ ಇತ್ತು ಈಗ ಇಲ್ಲ: ಬಿ.ಸಿ ನಾಗೇಶ್
ಪಾಕಿಸ್ತಾನ ತನ್ನ ಆಕ್ರಮಿತ ಕಾಶ್ಮೀರದಲ್ಲಿ ಜನರ ಮೇಲೆ ದೌರ್ಜನ್ಯ ಎಸಗುತ್ತಿರುವುದರ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ಇದರ ಪರಿಣಾಮವನ್ನು ಪಾಕಿಸ್ತಾನ ಎದುರಿಸಬೇಕಾಗುತ್ತದೆ. ನಾವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಹಾಗೂ ಲಡಾಕ್‌ನಲ್ಲಿ ನಮ್ಮ ಅಭಿವೃದ್ಧಿಯ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಇನ್ನು ಗಿಲ್ಗಿಟ್ ಹಾಗೂ ಬಾಲ್ಟಿಸ್ತಾನ್ ತಲುಪಿ, ಅಲ್ಲಿ ನಮ್ಮ ಗುರಿಯನ್ನು ಸಾಧಿಸಿ ತೋರಿಸುತ್ತೇವೆ ಎಂದು ಹೇಳಿದರು.