ಇಸ್ಲಾಮಾಬಾದ್: ಸೇನಾ ವಿರೋಧಿ ಹೇಳಿಕೆ ನೀಡಿ ಬಳಿಕ ಟೀಕೆಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರು, ಪಾಕಿಸ್ತಾನದ (Pakistan) ಸೇನೆ ಬಲವಾಗಿರಬೇಕೆಂದೇ ತಮ್ಮ ಪಕ್ಷ ಬಯಸುತ್ತದೆ. ನನ್ನ ಹೇಳಿಕೆಯಿಂದ ಪ್ರಬಲ ಪಡೆಗೆ ಹಾನಿ ಮಾಡುವ ಉದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಾರತ (india) ಹಾಗೂ ಪಾಕಿಸ್ತಾನವನ್ನು ಹೋಲಿಕೆ ಮಾಡಿದ ಹಿನ್ನೆಲೆ ಇಮ್ರಾನ್ ಖಾನ್ ವಿರುದ್ಧ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕಾಗಿ ಇಮ್ರಾನ್ ಖಾನ್ ತಮ್ಮ ಹೇಳಿಕೆ ಪಾಕಿಸ್ತಾನದ ಮನಸ್ಥಿತಿಗೆ ಹಾನಿ ಮಾಡುವ ಉದ್ದೇಶ ಹೊಂದಿಲ್ಲ. ಆದರೆ ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
Advertisement
Advertisement
ಭಾರತ ನಮ್ಮನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಿಲ್ಲ. ನಾವು ನಮ್ಮ ಸೇನೆಯೊಂದಿಗೆ ನಿಲ್ಲುತ್ತೇವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಸೇನೆ ನಮ್ಮದು. ನಾನು ಎಂದಿಗೂ ಇದರ ವಿರುದ್ಧ ಇರಲಾರೆ ಎಂಬುದನ್ನು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ ಎಂದರು.
Advertisement
ಕಳೆದ ವಾರ ಇಮ್ರಾನ್ ಖಾನ್ ಭಾರತದ ವಿದೇಶಾಂಗ ನೀತಿಯನ್ನು ಮುಕ್ತಕಂಠದಿಂದ ಶ್ಲಾಘನೆ ಮಾಡಿದ್ದು, ಐಎಸ್‌ಐಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದರು. ನಾನು ಐಎಸ್‌ಐ ಜಾತಕ ಬಯಲಿಗೆಳೆಯುತ್ತೇನೆ ಎಂದು ಇಮ್ರಾನ್ ಹೇಳಿದ್ದರು. ಈ ವಿಚಾರಕ್ಕೆ ಇಮ್ರಾನ್ ಖಾನ್ ತೀವ್ರ ಟೀಕೆಗೆ ಒಳಗಾಗಿದ್ದರು. ಇದನ್ನೂ ಓದಿ: ತೂಗು ಸೇತುವೆ ದುರಂತ- ಸಾವಿನ ಸಂಖ್ಯೆ 132ಕ್ಕೆ ಏರಿಕೆ; ಸ್ಥಳಕ್ಕೆ ಮೋದಿ ಭೇಟಿ ನೀಡುವ ಸಾಧ್ಯತೆ
Advertisement
ಶೆಹಬಾಜ್ ಷರೀಫ್ ಅವರ ಸರ್ಕಾರವನ್ನು ಉರುಳಿಸುವ ಪ್ರಯತ್ನದ ನಡುವೆ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಖಾನ್ ಒಪ್ಪಿಕೊಂಡಿದ್ದರು. ಆದರೆ ಇಮ್ರಾನ್ ಖಾನ್ ಅವರ ಈ ಪ್ರಸ್ತಾವನೆಯನ್ನು ಪ್ರಧಾನಿ ಶೆಹಬಾಜ್ ಷರೀಫ್ ತಿರಸ್ಕರಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಮಕ್ಕಳೊಂದಿಗೆ ಚೆಕ್‍ಡ್ಯಾಂಗೆ ಹಾರಿ ಮಹಿಳೆ ಆತ್ಮಹತ್ಯೆ