– ಕುಸ್ತಿಪಟುಗಳ ಪ್ರತಿಭಟನೆಗೆ ನಟ ಚೇತನ್ ಬೆಂಬಲ
ಬೆಂಗಳೂರು: ಭಾರತೀಯ ಕುಸ್ತಿ ಫೆಡರೇಷನ್ (WFI) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ಕಳೆದ ಕೆಲವು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ (Chetan Kumar) ಬೆಂಬಲ ಸೂಚಿಸಿದ್ದಾರೆ.
Advertisement
ಈ ಕುರಿತು ಫೇಸ್‌ಬುಕ್ ವಾಲ್‌ನಲ್ಲಿ ಪ್ರತಿಕ್ರಿಯಿಸಿರುವ ಚೇತನ್, ಕುಸ್ತಿಯು ನಮ್ಮ ದೇಶದ ಅತ್ಯಂತ ಯಶಸ್ವಿ ಒಲಿಂಪಿಕ್ ಕ್ರೀಡೆಯಾಗಿದೆ. ತಮ್ಮ ನ್ಯಾಯಕ್ಕಾಗಿ ನಮ್ಮ ಕುಸ್ತಿಪಟುಗಳ ಅಹಿಂಸಾತ್ಮಕ ಹೋರಾಟ ಮತ್ತು ಹೊಸ ಸಂಸತ್ತಿನ ಇತ್ತೀಚಿನ ಪ್ರತಿಭಟನೆಯ ಕಾರಣ, ರಾಷ್ಟ್ರ- ಪ್ರಾಯೋಜಿತ ಆಕ್ರಮಣ ಮತ್ತು ಎಫ್‌ಐಆರ್‌ಗಳನ್ನು ಅವರು ಎದುರಿಸಬೇಕಾಯಿತು ಎಂಬುದು ದುಃಖಕರವಾಗಿದೆ. ಶಕ್ತಿಶಾಲಿಗಳನ್ನು ರಕ್ಷಿಸಲು ಮತ್ತು ದುರ್ಬಲರನ್ನು ಬಲಿಪಶು ಮಾಡಲು ನಮ್ಮ ವ್ಯವಸ್ಥೆಯು ಯಾವುದೇ ಹಂತಕ್ಕೆ ಹೋಗುತ್ತದೆ/ಹೋಗಬಹುದು ಎಂಬುದಕ್ಕೆ ಇದೇ ಉದಾಹರಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
Advertisement
ಭಾನುವಾರ ಹೊಸ ಸಂಸತ್ ಭವನದ (New Parliament Building) ಎದುರು ಪ್ರತಿಭಟನೆ ನಡೆಸಲು ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ದೆಹಲಿ ಪೊಲೀಸರು ತಡೆದಿದ್ದರು. ಅವರು ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆಗೆ ತೆರಳಲು ಮುಂದಾದಾಗ ಕುಸ್ತಿಪಟುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು, ಬಳಿಕ ಅವರನ್ನು ವಶಕ್ಕೆ ಪಡೆದಿದ್ದರು. ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಂಗೀತಾ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Advertisement
ಪ್ರತಿಭಟನೆಯ ನಂತರ ಹಲವು ಕುಸ್ತಿಪಟುಗಳ ವಿರುದ್ಧ IPC ಸೆಕ್ಷನ್ 147, 149, 186, 188, 332, 353 PDPP ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು. ಅಲ್ಲದೇ ದೆಹಲಿಯ ಜಂತರ್ ಮಂತರ್‌ನಲ್ಲೂ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದಾರೆ. ಕ್ರೀಡಾಪಟುಗಳ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.