ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ (Karnataka Government) ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಉಳಿದ ಎರಡು ಗ್ಯಾರಂಟಿ ವ್ಯಾಪ್ತಿಯ ಇಲಾಖೆಗಳ ಸಭೆ ನಡೆದಿಲ್ಲ. ಇದನ್ನೂ ಓದಿ: ಮಧ್ಯಪ್ರದೇಶ ಸರ್ಕಾರದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ – ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್
ಅಧಿಕಾರಿಗಳ ಜತೆ ಇನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರು ಸಭೆ ನಡೆಸಿಲ್ಲ.
ಈಗಾಗಲೇ ಅಧಿಕಾರಿಗಳ ಸಭೆ ನಡೆಸಿದ ಇಂಧನ ಸಚಿವ ಕೆ ಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಆಹಾರ ಖಾತೆಯ ಸಚಿವ ಮುನಿಯಪ್ಪ ಸಭೆಯ ವರದಿಯನ್ನು ಸಿಎಂಗೆ ಒಪ್ಪಿಸಲಿದ್ದಾರೆ.
5 ಗ್ಯಾರಂಟಿ ಯೋಜನೆಗಳು ಯಾವುದು?
ಗೃಹಜ್ಯೋತಿ : ಎಲ್ಲಾ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್
ಗೃಹಲಕ್ಷ್ಮಿ : ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ.
ಅನ್ನಭಾಗ್ಯ : ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ
ಯುವನಿಧಿ : ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ – ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1,500 ರೂ.
ಉಚಿತ ಪ್ರಯಾಣ: ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ