ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಎಲ್ಲಿಂದ ಸ್ಪರ್ಧೆ ಮಾಡ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಇದು ಆಡಳಿತಾರೂಢ ಪಕ್ಷ ಬಿಜೆಪಿ(BJP) ನಾಯಕರಿಗೆ ಅಸ್ತ್ರವಾಗಿ ಪರಿಣಮಿಸಿದೆ.
ಸಿದ್ದರಾಮಯ್ಯ ಆಪ್ತ ಮುಖಂಡರು ಕೂಡ, ನಮ್ಮಲ್ಲಿ ಬನ್ನಿ ಎಂದು ಆಹ್ವಾನ ನೀಡುವ ಮೂಲಕ ಸ್ವತಃ ಸಿದ್ದರಾಮಯ್ಯರಲ್ಲಿ ಗೊಂದಲ ಮೂಡಿಸ್ತಿದ್ದಾರೆ. ಇದು ಹೀಗೆ ಮುಂದುವರೆದ್ರೆ ತಪ್ಪು ಸಂದೇಶ ಹೋಗಬಹುದು ಎಂಬ ಕಾರಣಕ್ಕೆ, ಇದಕ್ಕೆಲ್ಲಾ ಪೂರ್ಣವಿರಾಮ ಇಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಶಿವಸೇನೆ ಮುಖಂಡ ಗುಂಡಿನ ದಾಳಿಗೆ ಬಲಿ
Advertisement
Advertisement
ತಾವು ಸ್ಪರ್ಧೆ ಮಾಡಲಿರುವ ಕ್ಷೇತ್ರ ಯಾವುದು ಎಂಬುದನ್ನು ಸಿದ್ದರಾಮಯ್ಯ ನ.13ರಂದು ಪ್ರಕಟ ಮಾಡಬಹುದು ಎಂಬ ಸುದ್ದಿ ಹಬ್ಬಿದೆ. ಕೋಲಾರದ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, ತಮ್ಮ ಕ್ಷೇತ್ರವನ್ನು ಸಿದ್ದರಾಮಯ್ಯ ಘೋಷಣೆ ಮಾಡಬಹುದು ಎನ್ನಲಾಗಿದೆ.
Advertisement
ಟಿಪ್ಪು ಜಯಂತಿ ಮಡಿದ ಕಾರಣಕ್ಕೆ ಸಿದ್ದರಾಮಯ್ಯಗೆ ಕ್ಷೇತ್ರ ಸಿಗ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಟೀಕಿಸಿದ್ದಾರೆ. ತಾಕತ್ತಿದ್ರೆ ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಗೆಲ್ಲಿ ಎಂದು ಸವಾಲ್ ಹಾಕಿದ್ದಾರೆ.
Advertisement
ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳು
ಕ್ಷೇತ್ರ 1 – ವರುಣಾ
ಕ್ಷೇತ್ರ 2 – ಕೋಲಾರ
ಕ್ಷೇತ್ರ 3 – ಬಾದಾಮಿ
ಕ್ಷೇತ್ರ 4 – ಚಾಮರಾಜಪೇಟೆ