LatestMain PostNational

ಜಾಮೀನಿನ ಮೇಲೆ ಹೊರಬಂದವನು ಪತ್ನಿಯನ್ನು ಇರಿದು ಕೊಂದ

ಚೆನ್ನೈ: ಜಾಮೀನಿನ ಆಧಾರದ ಮೇಲೆ ಹೊರಗೆ ಬಂದಿದ್ದ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದು, ಇದೀಗ ಪರಾರಿಯಾಗಿದ್ದಾನೆ.

ಆರೋಪಿಯನ್ನು ಸೆಲ್ವರಾಜ ಎಂದು ಗುರುತಿಸಲಾಗಿದ್ದು, ಈತ ಟಿಎನ್‍ನ ಕರೂರಿನಲ್ಲಿ ದಿನಗೂಲಿ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಈತ ಜಾಮೀನಿನ ಆಧಾರದ ಮೇಲೆ ಬಿಡುಗಡೆಯಾಗಿದ್ದನು. ಆದರೆ ಗುರುವಾರ ತಮ್ಮ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಮೃತ ಮಹಿಳೆಯನ್ನು ಸತ್ಯ ಎಂದು ಗುರುತಿಸಲಾಗಿದ್ದು, ಆರೋಪಿ ಸೆಲ್ವರಾಜ್ ಮತ್ತು ಸತ್ಯ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಪತ್ನಿಯ ನಡತೆಯ ಬಗ್ಗೆ ಆರೋಪಿ ಸದಾ ಸಂಶಯಪಡುತ್ತಿದ್ದನು. ಈ ವಿಚಾರವಾಗಿ ಅನೇಕ ಬಾರಿ ದಂಪತಿ ನಡುವೆ ಜಗಳವಾಗುತ್ತಿತ್ತು. ಇದನ್ನೂ ಓದಿ: ರೈಲ್ವೆ ಉದ್ಯೋಗದ ಆಸೆಗೆ ತನ್ನ ಹೆಬ್ಬೆರಳಿನ ಚರ್ಮ ತೆಗೆದು ಸ್ನೇಹಿತನಿಗೆ ಅಂಟಿಸಿ ಸಿಕ್ಕಿಬಿದ್ದ

ಗುರುವಾರ ಕೆಲಸ ಮುಗಿಸಿ ಮನೆಗೆ ಬಂದ ಸತ್ಯ ಹಾಗೂ ಸೆಲ್ವರಾಜ್ ನಡುವೆ ಮತ್ತೆ ಜಗಳ ನಡೆದಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೋಪಗೊಂಡ ಸೆಲ್ವರಾಜ್ ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಸತ್ಯ ಅವರ ಹೊಟ್ಟೆಗೆ ಇರಿದಿದ್ದಾನೆ. ನಂತರ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತ್ಯರನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಸೆಲ್ವರಾಜ್ ತನ್ನ ಹಿರಿಯ ಮಗನಿಗೆ ತಿಳಿಸಿದ್ದಾನೆ. ನಂತರ ಕೂಡಲೇ ಆಕೆಯನ್ನು ಕರೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾಳೆ.

ಬಳಿಕ ಘಟನೆ ಸಂಬಂಧ ಮಾಹಿತಿ ಪಡೆದ ಕರೂರು ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಸೆಲ್ವರಾಜ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಆರೋಪಿ ಮೇಲೆ ಇನ್ನೂ ಅನೇಕ ಪ್ರಕರಣಗಳು ಬಾಕಿ ಇವೆ. ಇದನ್ನೂ ಓದಿ: ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜೆಡಿಎಸ್‌ನಲ್ಲೇ ಉಳಿಯುತ್ತಾರಾ ಜಿಟಿಡಿ?

Live Tv

Leave a Reply

Your email address will not be published.

Back to top button