– ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006 ಏನು ಹೇಳುತ್ತದೆ?
ಚೆನ್ನೈ: ವಾಣಿಜ್ಯ ಉದ್ದೇಶಗಳಿಗಾಗಿ ತಾಯಿಯ ಎದೆಹಾಲು ಮಾರಾಟ ಮಾಡುವುದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006ರ (FSS Act 2006) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಿದ್ದೂ ಚೆನ್ನೈನಲ್ಲಿ ತಾಯಿಯ ಎದೆಹಾಲು (Human Breast Milk) ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ.
ಪ್ರತಿ 100 ಮಿಲಿ ತಾಯಿಯ ಎದೆಹಾಲನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದ ಮಳಿಗೆಯೊಂದನ್ನು ಚೆನ್ನೈನಲ್ಲಿ (Chennai) ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಸೀಲ್ ಮಾಡಿದ್ದು, ವೈಜ್ಞಾನಿಕ ತನಿಖೆಗಾಗಿ ಮಾದರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಮೊಬೈಲ್ ಕಳೆದಿದೆ, ಸಾಕ್ಷ್ಯ ನಾಶ ಮಾಡಿದ್ದಾರೆ ಅನ್ನೋದನ್ನ ಎಸ್ಐಟಿಯವರು ಹೇಳಿದ್ರೆ ಒಪ್ಪಿಕೊಳ್ತೇನೆ: ಪರಮೇಶ್ವರ್
Advertisement
Advertisement
ತಾಯಂದಿರ ಎದೆಹಾಲನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ 10 ದಿನಗಳಿಂದ ತೀವ್ರ ನಿಗಾ ವಹಿಸಿದ್ದ ಅಧಿಕಾರಿಗಳು ಶುಕ್ರವಾರ (ಇಂದು) ಮಳಿಗೆ ಮೇಲೆ ದಾಳಿ ನಡೆಸಿದ್ದಾರೆ. ತಿರುವಳ್ಳೂರಿನ ಆಹಾರ ಸುರಕ್ಷತಾ ಇಲಾಖೆಯ ನಿಯೋಜಿತ ಅಧಿಕಾರಿ ಡಾ ಎಂ ಜಗದೀಶ್ ಚಂದ್ರ ಬೋಸ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ 100 ಮಿಲಿ ಬಾಟಲಿಗಳಲ್ಲಿ ಸಂಗ್ರಹಿಸಿದ್ದ ಮಾನವರ ಎದೆಹಾಲು ಹಾಗೂ ದಾನಿ ತಾಯಂದಿರಿಂದ ಪಡೆದ ಹಾಲನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
Advertisement
ಹಾಲನ್ನು ಪ್ಯಾಕಿಂಗ್ ಮಾಡುವುದಕ್ಕೆ ಅವರು ಯಾವ ವಿಧಾನಗಳನ್ನು ಅನುಸರಿಸಿದ್ದಾರೋ ನಮಗೆ ತಿಳಿದಿಲ್ಲ. ಈ ಬಗ್ಗೆ ವೈಜ್ಞಾನಿಕವಾಗಿ ತನಿಖೆ ನಡೆಸಿ, ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಇದನ್ನೂ ಓದಿ: ದೇವರಲ್ಲಿ ನಂಬಿಕೆ ಇದ್ರೆ ಮನೆಯಲ್ಲೇ ಧ್ಯಾನ ಮಾಡಿ- ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
Advertisement
ಹಾಲನ್ನು ಪಾಶ್ಚಾತ್ಯೀಕರಿಸಲು ಅವರು ಯಾವ ವಿಧಾನವನ್ನು ಅನುಸರಿಸಿದ್ದಾರೆ ಎಂಬುದು ನಮಗೆ ತಿಳಿದಿಲ್ಲ, ತನಿಖೆಯ ನಂತರ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಸದ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿಯಲ್ಲಿ ತಾಯಿಯ ಎದೆಹಾಲು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಅಗತ್ಯವಿದ್ದರೆ, ಅದನ್ನು ಸಂಗ್ರಹಿಸಿ ವೈದ್ಯರ ಸಲಹೆ ಮತ್ತು ಮೇಲ್ವಿಚಾರಣೆ ಮೇರೆಗೆ ಶಿಶುಗಳಿಗೆ ನೀಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಶತ್ರು ಸಂಹಾರ ಯಾಗ ನಡೆದಿಲ್ಲ – ದೇವಸ್ಥಾನದ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಡಿಕೆಶಿ