ಚಿಕ್ಕಮಗಳೂರು: ನಗರದ (Chikkamagaluru) ಆಜಾದ್ ಪಾರ್ಕ್ ವೃತ್ತದಲ್ಲಿನ ನಗರಸಭೆ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಜಿಮ್‍ಗೆ ನಮೋ ಎಂದು ನಾಮಕರಣ ಮಾಡಲು ನಗರಸಭೆ ಮುಂದಾಗಿದೆ. ಈ ನಿಲುವನ್ನು ಖಂಡಿಸಿ ನಗರಸಭೆ ವಿರೋಧ ಪಕ್ಷದ ಸದಸ್ಯರು ಹಾಗೂ ಕಾಂಗ್ರೆಸ್ (Congress) ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗುತ್ತಿದ್ದಂತೆ ವಿಪಕ್ಷಗಳ ಸದಸ್ಯರು ಸಭೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಜಿಮ್‍ಗೆ ಜೈಭೀಮ್ ವ್ಯಾಯಾಮ ಶಾಲೆ ಎಂದು ನಾಮಕರಣ ಮಾಡಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರಸಭೆ ಅಧ್ಯಕ್ಷರಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರು. ಆದರೆ ಈಗ ಜಿಮ್‍ಗೆ ನಮೋ ಎಂದು ಹೆಸರಿಡಲು ಮುಂದಾಗಿರುವ ವಿಚಾರವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ
ನಗರಸಭೆಯ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಜೈಭೀಮ್ ಹೆಸರಿಗೆ ಮನ್ನಣೆ ನೀಡದೇ ಏಕಪಕ್ಷೀಯವಾಗಿ ನಮೋ ಜಿಮ್ ನಾಮಕರಣಕ್ಕೆ ನಿರ್ಣಯ ಕೈಗೊಂಡಿದ್ದಾರೆ. ಅವರು ಅಂಬೇಡ್ಕರ್ ವಿರೋಧಿಯಾಗಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ನಗರಸಭೆ ಅಧ್ಯಕ್ಷ ಪ್ರತಿಕ್ರಿಯೆ ನೀಡಿದ್ದು, ತುರ್ತು ಸಭೆ ಕರೆದು ಜೈ ಭೀಮ್ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ
Web Stories