ಮುಂಬೈ: ಕೊರೊನಾ ವೈರಸ್ ಮೂರನೇ ಅಲೆಯು ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದೆ. ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು ಹಾಗೂ 20ಕ್ಕೂ ಹೆಚ್ಚು ಮಂದಿ ಶಾಸಕರಿಗೂ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿರುವುದು ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ.
Advertisement
ಸಚಿವರು, ಶಾಸಕರಿಗೆ ಕೋವಿಡ್ ತಗುಲಿರುವ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ
Advertisement
10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ ದೃಢಪಟ್ಟಿರುವುದರಿಂದ ವಿಧಾನಸಭಾ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಎಲ್ಲರೂ ಹೊಸ ವರ್ಷ, ಬರ್ತ್‌ಡೇ ಸೇರಿದಂತೆ ಇತರೆ ಸಂತೋಷ ಕೂಟಗಳಲ್ಲಿ ಭಾಗಿಯಾಗಲು ಬಯಸುತ್ತಾರೆ. ವ್ಯಾಪಕವಾಗಿ ಹರಡುತ್ತಿರುವ ಹೊಸ ತಳಿ ಓಮಿಕ್ರಾನ್ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಪ್ರಕರಣಗಳ ಹೆಚ್ಚಳದಿಂದಾಗಿ ಕೆಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರದ ಮುಂಬೈ, ಪುಣೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ವರ್ಷದಂದೇ ದುರಂತ – ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದ 12 ಮಂದಿ ದುರ್ಮರಣ
ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ವರದಿಯಾಗುತ್ತಿವೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರವು ಗುರುವಾರ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿತ್ತು. ಸಮಾರಂಭಗಳಲ್ಲಿ ಭಾಗವಹಿಸುವವರ ಸಂಖ್ಯೆ ಶೇ. 50 ಇರಬೇಕು ಎಂದು ಕಟ್ಟುನಿಟ್ಟಾಗಿ ಆದೇಶದಲ್ಲಿ ತಿಳಿಸಿತ್ತು.
ಮುಂಬೈನಲ್ಲಿ ಶುಕ್ರವಾರ ಒಂದೇ ದಿನ 5,631 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪುಣೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 5.9ಕ್ಕೆ ಏರಿದೆ.