ಢಾಕಾ: 7 ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ (Explosion) 14 ಮಂದಿ ದಾರುಣ ಸಾವಿಗೀಡಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶ ಢಾಕಾದ (Dhaka) ಗುಲಿಸ್ತಾನ್ ಪ್ರದೇಶದಲ್ಲಿ ನಡೆದಿದೆ.
ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. 11 ಅಗ್ನಿಶಾಮಕ ಸೇವೆಗಳ ತುರ್ತು ಘಟಕಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (Dhaka Medical College Hospital) ದಾಖಲಿಸಲಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ವಿಮಾನ ಅಪಘಾತ- ಭಾರತೀಯ ಮೂಲದ ಮಹಿಳೆ ಸಾವು, ಮಗಳು ಗಂಭೀರ
Advertisement
Advertisement
ಸ್ಫೋಟ ಸಂಭವಿಸಿದ ಸ್ಥಳದಿಂದ ಸಮೀಪದ ಕಟ್ಟಡಗಳಿಗೂ ಹಾನಿಯಾಗಿದೆ. ರಸ್ತೆಯಲ್ಲಿ ನಿಂತಿದ್ದ ಬಸ್‌ಗಳೂ ಸಾಕಷ್ಟು ಹಾನಿಯಾಗಿದೆ. ಕಟ್ಟಡದ ನೆಲ ಮಳಿಗೆಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪಿಒಕೆಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಬ್ ಕಡ್ಡಾಯ
Advertisement
Advertisement
ಜನನಿಬಿಡ ಸಿದ್ದಿಕ್ ಬಜಾರ್‌ನಲ್ಲಿರುವ ಈ ಕಟ್ಟಡವು ಹಲವಾರು ಕಚೇರಿಗಳು ಮತ್ತು ಮಳಿಗೆಗಳನ್ನ ಹೊಂದಿರುವ ವಾಣಿಜ್ಯ ಕಟ್ಟಡವಾಗಿತ್ತು. ನೆಲಮಹಡಿಯಲ್ಲಿ ನೈರ್ಮಲ್ಯ ಸಾಮಗ್ರಿಗಳನ್ನ ಮಾರಾಟ ಮಾಡುವ ಅಂಗಡಿಗಳಿದ್ದವು, ಅಲ್ಲಿಯೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.