ಕೋಲ್ಕತ್ತಾ: ಬೀದಿ ಬದಿ ಮಾರುವ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಗಂಧ ಗ್ರಾಮ ಪಂಚಾಯತ್ನ ಡೋಗಾಚಿಯಾ ಪ್ರದೇಶದಲ್ಲಿ ನಡೆದಿದೆ. ಅತಿಸಾರದಿಂದ ಅಸ್ವಸ್ಥಗೊಂಡಿರುವುದಾಗಿ ಶಂಕಿಸಲಾಗಿದೆ.
Advertisement
ಅತಿಸಾರ ಲಕ್ಷಣಗಳು ಕಂಡುಬಂದಿದ್ದು, ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ
Advertisement
ಮಾಹಿತಿ ಪಡೆದ ಆರೋಗ್ಯ ಇಲಾಖೆಯ ವಿಶೇಷ ತಂಡ ಸ್ಥಳಕ್ಕೆ ಆಗಮಿಸಿ ರೋಗಿಗಳಿಗೆ ಔಷಧ ವಿತರಣೆ ಮಾಡಿದ್ದಾರೆ. ಗಂಭೀರ ಅನಾರೋಗ್ಯ ಪರಿಣಾಮ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ತಂಡವು ಸೂಚಿಸಿದೆ.
Advertisement
Advertisement
ಅನಾರೋಗ್ಯಕ್ಕೆ ಒಳಗಾದವರಲ್ಲಿ ಡೊಗಾಚಿಯಾ, ಬಹಿರ್ ರಣಗಾಚಾ ಹಾಗೂ ಮಕಲ್ತಲಾ ನಿವಾಸಿಗಳು ಸೇರಿದ್ದಾರೆ ಎಂದು ವರದಿಯಾಗಿದೆ.