ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ ಡ್ಯಾಂ (KRS Dam) ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ (Cauvery River) 10,000 ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್‌ಎಸ್ ಡ್ಯಾಂನ 10 ಗೇಟ್‌ಗಳ ಮೂಲಕ 10,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗಿದೆ. ಡ್ಯಾಂನಿಂದ ನೀರು ಹಾಲ್ನೊರೆಯಂತೆ ರಭಸವಾಗಿ ಬಂಡೆಗಳಿಗೆ ಅಪ್ಪಳಿಸಿ ಭೋರ್ಗರೆದು ಕಾವೇರಿ ನದಿಗೆ ಹರಿಯುತ್ತಿದೆ. ಇದನ್ನೂ ಓದಿ: ಬೋಟ್‌ಗೆ ಬೆಂಕಿ ಹೊತ್ತಿಕೊಂಡು 40 ಹೈಟಿಯನ್ ವಲಸಿಗರು ಸಾವು
ಒಂದೆಡೆ ಪ್ರವಾಹ ಭೀತಿ ಇದ್ದರೆ, ಮತ್ತೊಂದೆಡೆ ಕಾವೇರಿಗೆ ಜೀವ ಕಳೆ ಬಂದಿದೆ. ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡುಗಡೆ ಮಾಡಿದ್ದು, ಸಂಜೆ ವೇಳೆಗೆ ಡ್ಯಾಂ ಹೊರ ಹರಿವಿನ ಪ್ರಮಾಣ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಇದನ್ನೂ ಓದಿ: ರೇಣುಕಾನನ್ನು ಹೊಡೆಯೋ ದೃಶ್ಯ ಮೊಬೈಲ್‌ನಲ್ಲಿ ರೆಕಾರ್ಡ್ – ದರ್ಶನ್ ಥಳಿಸ್ತಿರೋ 3 ಸೆಕೆಂಡ್ ದೃಶ್ಯ ಡಿಲೀಟ್
ಹೀಗಾಗಿ ಕಾವೇರಿ ನದಿ ಪಾತ್ರದ 92 ಗ್ರಾಮಗಳಲ್ಲಿ ನೆರೆ ಭೀತಿ ಇದ್ದು, ಪ್ರವಾಸಿ ತಾಣಗಳಲ್ಲೂ ಪ್ರವಾಹದ ಆತಂಕ ಶುರುವಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಕಂಟ್ರೋಲ್ ರೂಂ ಸ್ಥಾಪಿಸಿದೆ. ಇದನ್ನೂ ಓದಿ: ಪಾಕಿಸ್ತಾನಿ ಭಯೋತ್ಪಾದಕರನ್ನು ಬೇಟೆಯಾಡಲು ಜಮ್ಮು ಪ್ರದೇಶಕ್ಕೆ 500 ಪ್ಯಾರಾ ಕಮಾಂಡೋಗಳ ಎಂಟ್ರಿ