Bengaluru CityDistrictsKarnatakaLatestMain Post

ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಬ್ಲಾಸ್ಟ್ – 12 ವಿದ್ಯಾರ್ಥಿಗಳಿಗೆ ಪಾಸಿಟಿವ್

ಬೆಂಗಳೂರು: ನಗರದ ಕಾಲೇಜೊಂದರಲ್ಲಿ 12 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಗಮನಾರ್ಹ ವಿಚಾರವೆಂದರೆ 12 ವಿದ್ಯಾರ್ಥಿಗಳಲ್ಲಿ ಈಗಾಗಲೇ 11 ವಿದ್ಯಾರ್ಥಿಗಳು ಸಂಪೂರ್ಣ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 9 ಮಂದಿಗೆ ಕೊರೊನಾ ಗುಣಲಕ್ಷಣಗಳು ಕಂಡುಬಂದಿದೆ.

ಆನೇಕಲ್‍ನ ಮರಸೂರಿನಲ್ಲಿ ಇರುವ ಸ್ಫೂರ್ತಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿಯಾಗಿದೆ. ಇನ್ನೂ ಈ ಎಲ್ಲಾ ವಿದ್ಯಾರ್ಥಿಗಳು ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿಗಳಾಗಿದ್ದಾರೆ. ಜೂನ್‍ನಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲಸಿಕೆ ಪಡೆದಿರಲಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಇಂದು 400 ಗಡಿದಾಟಿದ ಕೊರೊನಾ – 6 ಸಾವು

ಒಟ್ಟು 134 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ 12 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದೀಗ ಆ ವಿದ್ಯಾರ್ಥಿಗಳನ್ನ ಐಸೋಲೇಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಲೇಜಿನಲ್ಲಿ ಪ್ರತಿ 15 ದಿನಗಳಿಕ್ಕೊಮ್ಮೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಪರೀಕ್ಷಿಸಲಾಗುತ್ತಿದೆ ಮತ್ತು ಎಲ್ಲಾ ಪ್ರಾಥಮಿಕ ಸಂಪರ್ಕಗಳು ಮತ್ತು ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್- ಠಾಣೆ ಮೆಟ್ಟಿಲೇರಿದ ಪ್ರಕರಣ

Leave a Reply

Your email address will not be published. Required fields are marked *

Back to top button