ಗಾಂಧೀನಗರ: ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನ ವಿವಾಹದಲ್ಲಿ ಆಹಾರ ಸೇವಿಸಿದ ಬಳಿಕ 1,200 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.
Advertisement
ವಿಸ್ನಗರ ತಾಲೂಕಿನ ಸವಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮದುವೆಯಲ್ಲಿ ಆಹಾರ ಸೇವಿಸಿದ ನಂತರ 1,200 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಹ್ಸಾನಾ ಪೊಲೀಸ್ ವರಿಷ್ಠಾಧಿಕಾರಿ ಪಾರ್ಥರಾಜ್‍ಸಿನ್ಹ್ ಗೋಹಿಲ್ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ
Advertisement
Advertisement
ಊಟದ ಬಳಿಕ ಜನರು ವಾಂತಿ ಮಾಡಲು ಪ್ರಾರಂಭಿಸಿದರು. ನಂತರ ಅವರನ್ನು ವಿಸ್ನಗರ, ಮೆಹ್ಸಾನಾ ಮತ್ತು ವಡ್ನಗರದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಇದೀಗ ಮದುವೆಯಲ್ಲಿ ನೀಡಲಾದ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಆಹಾರ ಮತ್ತು ಔಷಧ ಇಲಾಖೆಯಿಂದ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗನಿಗಾಗಿ 1,400 ಕಿ.ಮೀ ಸ್ಕೂಟರ್ ಓಡಿಸಿದ್ದ ತಾಯಿಗೆ ಟೆನ್ಶನ್ – ಮೋದಿಗೆ ಪತ್ರ
Advertisement
ಸಾವಳ ಗ್ರಾಮದಲ್ಲಿ ನಡೆದ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಮಗನ ಮದುವೆ ಸಮಾರಂಭದಲ್ಲಿ ಹಲವಾರು ಜನರು ಪಾಲ್ಗೊಂಡಿದ್ದರು. ಕಾರ್ಯಕ್ರದಲ್ಲಿ ಮಾಂಸಾಹಾರ ಮೆನು ಕೂಡ ಇತ್ತು. ಸದ್ಯ ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಸ್ನಗರ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.