ದಿಸ್ಪುರ್: ಅಸ್ಸಾಂನ ಮಜುಲಿ ಜಿಲ್ಲೆಯ ಗರ್ಮುರ್ ಬಳಿಯ ಮಹರಿಚುಕ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಸಾದ ಸೇವಿಸಿದ ನಂತರ 18 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಪುಲಕ್ ಮಹಾಂತ್ ಮಾತನಾಡಿದ್ದು, ಸುಮಾರು 18ಕ್ಕೂ ಹೆಚ್ಚು ಜನರು ದೇವಾಯದ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದರು. ಸಂತ್ರಸ್ತ ಜನರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಸುಧಾರಿಸಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸ್ಪಾ ಮ್ಯಾನೇಜರ್, ಗ್ರಾಹಕರು ಸೇರಿ ಯುವತಿ ಮೇಲೆ ಅತ್ಯಾಚಾರ – ಪೊಲೀಸರಿಗೆ ನೋಟಿಸ್
Advertisement
Advertisement
ವೈದ್ಯರು ಈ ಕುರಿತು ಮಾಹಿತಿ ಕೊಟ್ಟಿದ್ದು, ಕಳೆದ ರಾತ್ರಿ ಹೊಟ್ಟೆ ನೋವು ಮತ್ತು ವಾಂತಿ ಎಂದು 12 ಜನರು ಆಸ್ಪತ್ರೆಗೆ ಬಂದಿದ್ದರು. ಇಂದು ಬೆಳಗ್ಗೆ ಮತ್ತೆ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಅವರ ಸ್ಥಿತಿ ಈಗ ಸುಧಾರಿಸಿದೆ. ಇವರು ತಿಂದಿರುವ ಆಹಾರ ವಿಷಪೂರಿತವಾಗಿರಬಹುದು ಎಂದು ನಾವು ಶಂಕಿಸುತ್ತೇವೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
Advertisement
Advertisement
ಸ್ಥಳೀಯರ ಪ್ರಕಾರ, ಗ್ರಾಮಸ್ಥರೆಲ್ಲ ಶುಕ್ರವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆವು. ಪ್ರಸಾದವನ್ನು ಸೇವಿಸಿದ ಕೂಡಲೇ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಮೂವರು ಮಕ್ಕಳು ಸೇರಿದಂತೆ 18 ಜನರನ್ನು ತಕ್ಷಣ ಶ್ರೀ ಶ್ರೀ ಪಿತಾಂಬರ ದೇವ್ ಗೋಸ್ವಾಮಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐವರ ಪ್ರಾಣ ಉಳಿಸಿದೆ ಅಂಗಾಂಗ ದಾನ – ಮಗನ ಸಾವಿನಲ್ಲಿ ಸಾರ್ಥಕತೆ ಕಂಡ ಕುಟುಂಬ