ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ತೋಶಖಾನ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಖಾನ್ ಅವರ 200ಕ್ಕೂ ಹೆಚ್ಚು ಬೆಂಬಲಿಗರನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಂಜಾಬ್‌ನಾದ್ಯಂತ ವಿವಿಧೆಡೆ ಇಮ್ರಾನ್ ಖಾನ್ ಬೆಂಬಲಿಗರನ್ನ ಬಂಧಿಸಿರುವುದಾಗಿ ಪೊಲೀಸರು (Pakistan Punjab Police) ತಿಳಿಸಿದ್ದಾರೆ.
Advertisement
150ಕ್ಕೂ ಹೆಚ್ಚು ಕೇಸ್‌ಗಳಲ್ಲಿ ವಾಂಟೆಡ್ ಆಗಿರುವ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಲ್ಲಿದ್ದಾಗ ತಮಗೆ ಬಂದ ಉಡುಗೊರೆಗಳನ್ನ ಅಕ್ರಮವಾಗಿ ಮಾರಾಟ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಜೊತೆಗೆ 5 ವರ್ಷ ಸಕ್ರಿಯ ರಾಜಕಾರಣದಿಂದಲೂ ಬ್ಯಾನ್ ಮಾಡಿ ಆದೇಶಿಸಿತು. ಆ ನಂತರ ಪೂರ್ವ ಪಂಜಾಬ್ ಪ್ರಾಂತ್ಯದ ಪೊಲೀಸರು ಲಾಹೋರ್‌ನಲ್ಲಿರುವ ಇಮ್ರಾನ್ ಖಾನ್ ಮನೆಯಲ್ಲೇ ಬಂಧಿಸಿದ್ದರು. ಈ ಬೆಳವಣಿಗೆ ಕಂಡುಬಂದ ಒಂದು ದಿನದ ನಂತರ ಇಮ್ರಾನ್ ಖಾನ್ ಅವ್ರನ್ನ ಪಿಟಿಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಯಿತು. ಇದನ್ನೂ ಓದಿ: ಪಾಕ್‌ನಲ್ಲಿ ರಾಜಕೀಯ ಕೋಲಾಹಲ – ಜೈಲುಪಾಲಾದ ಕ್ರಿಕೆಟ್ ದಂತಕಥೆಯ ಜೀವಕ್ಕೆ ಇದೆಯಾ ಆಪತ್ತು?
Advertisement
Advertisement
ಪಂಜಾಬ್ ಪೊಲೀಸರ ಪ್ರಕಾರ, ಖಾನ್ ಬಂಧನದ ನಂತರ ಪಂಜಾಬ್‌ನಾದ್ಯಂತ ಇಮ್ರಾನ್ ಖಾನ್ ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದರು. ಆದ್ದರಿಂದ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅವರಲ್ಲಿ 10ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಭಯೋತ್ಪಾದನೆ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. ಖಾನ್ ಬೆಂಬಲಿಗರ ದಾಳಿ ನಡೆಸಿದ ಪೊಲೀಸರು ಶಸ್ತ್ರಾಸ್ತ್ರಗಳನ್ನ ಕಸಿದು ಪ್ರತಿಭಟನೆಯನ್ನ ಹತ್ತಿಕ್ಕಿದ್ದಾರೆ ಎಂದು ತಿಳಿದುಬಂದಿದೆ.
Advertisement
1992ರ ಪಾಕಿಸ್ತಾನ ವಿಶ್ವಕಪ್ ವಿಜೇತ ತಂಡದ ನಾಯಕ ಹಾಗೂ 70 ವರ್ಷದ ಹಿರಿಯ ರಾಜಕಾರಣಿ ಇಮ್ರಾನ್ ಖಾನ್, ಕೋಟ್ಯಂತರ ರೂ. ಮೌಲ್ಯದ ಉಡುಗೊರೆಯನ್ನ ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪದ ಮೇಲೆ ಅವರನ್ನ ಬಂಧಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿನ ಪ್ರಕರಣವನ್ನ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಪಾಕಿಸ್ತಾನ ಸುಪ್ರೀಂ ಕೋರ್ಟ್ (Pakistan Supreme Court) ಇಮ್ರಾನ್ ಖಾನ್ ಮನವಿಯನ್ನ ತಿರಸ್ಕರಿಸಿತ್ತು. ಇದನ್ನೂ ಓದಿ: ಇರಾಕ್‌ನಲ್ಲಿ ಮಾರಾಟವಾದ ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ
ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು (Islamabad Trial Court) ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್‌ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್‌ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್
Web Stories