ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ಮುಂದುವರಿದಿದೆ. ಇಂದು (ಗುರುವಾರ) ಮುಂಜಾನೆ AQI 452ರ ಗಡಿ ದಾಟಿದ್ದು ದಟ್ಟಮಂಜಿನಂತಹ ಹೊಗೆ ಆಚರಿಸಿಕೊಂಡಿತ್ತು. ಫ್ಲೈಟ್‌ರಾಡಾರ್ ಪ್ರಕಾರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದೆ, ಇದರಿಂದಾಗಿ 300 ಅಧಿಕ ವಿಮಾನಗಳು ವಿಳಂಬವಾಗಿವೆ.
Kind attention to all flyers!#Fog #FogAlert #DelhiAirport pic.twitter.com/p7QNpsCKsW
— Delhi Airport (@DelhiAirport) November 14, 2024
Advertisement
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಜಧಾನಿ ಪ್ರದೇಶದ ಹಲವಾರು ಪ್ರದೇಶಗಳಲ್ಲಿ AQI 450 ಕ್ಕಿಂತ ಹೆಚ್ಚು ದಾಖಲಾಗಿದೆ. ಆನಂದ್ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್ಪುರಿ, ಮುಂಡ್ಕಾ, ನಜಾಫ್ಗಢ್, ಲಜಪತ್ ನಗರ, ಪಟ್ಪರ್ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್, ಮತ್ತು ವಜೀರ್‌ಪುರ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಸೇರಿವೆ.
Advertisement
ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್‌ನಿಂದ ದೆಹಲಿಗೆ ಹಿಂದಿರುಗಿದ ಬಗ್ಗೆ ಮಾತನಾಡಿ, ದೆಹಲಿಗೆ ಆಗಮಿಸಿದ್ದು `ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದ ಅನುಭವ’ ಎಂದು ಹೇಳಿದರು. ವಯನಾಡಿನ ವಾಯು ಗುಣಮಟ್ಟ ಸೂಚ್ಯಂಕವು 35% ರಷ್ಟಿದ್ದರೆ, ದೆಹಲಿಯ ಮಾಲಿನ್ಯವು ಮರುಕಳಿಸಲಾಗದ ಬಿಕ್ಕಟ್ಟಾಗಿದೆ ಎಂದು ವಿವರಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಸಾಮೂಹಿಕ ಕ್ರಮಕ್ಕೆ ಕರೆ ನೀಡಿದರು.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟಿಯರಾಲಜಿಯು ನವೆಂಬರ್ 15 ರಿಂದ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಸ್ವಲ್ಪ ಸುಧಾರಣೆ ಕಂಡುಬರುವ ಮುನ್ಸೂಚನೆಯನ್ನು ಒದಗಿಸಿದೆ, ವಾರಾಂತ್ಯದಲ್ಲಿ ಮತ್ತಷ್ಟು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.