ಢಾಕಾ: ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಗಲಭೆಯಲ್ಲಿ 105 ಮಂದಿ ಬಾಂಗ್ಲಾದೇಶಿಗರು ಕೊಲ್ಲಲ್ಪಟ್ಟಿದ್ದಾರೆ. ಇದರಿಂದ ಎಚ್ಚೆತ್ತ 300ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ಮಾಹಿತಿ ಪ್ರಕಾರ, ಬಾಂಗ್ಲಾದೇಶದಲ್ಲಿ 15 ಸಾವಿರ ಮಂದಿ ಭಾರತೀಯರು ಇದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ 300ಕ್ಕೂ ಹೆಚ್ಚು ಮಂದಿ ತವರಿಗೆ ಮರಳಿದ್ದಾರೆ. ಬಂದವರಲ್ಲಿ ಬಹುತೇಕರು ಎಂಬಿಬಿಎಸ್ ವ್ಯಾಸಂಗಕ್ಕೆ ತೆರಳಿದ್ದರು. ಅಲ್ಲದೇ ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ ಮತ್ತು ಜಮ್ಮು ಮತ್ತು ಕಾಶ್ಮೀರ ಮೂಲದವರೇ ಹೆಚ್ಚಿಮ ಸಂಖ್ಯೆಯಲ್ಲಿದ್ದರು ಎಂದು ವರದಿಯಾಗಿದೆ.
Advertisement
ಮೀಸಲಾತಿ ವಿರೋಧಿಸಿ ಹೋರಾಟ ನಡೆಸುತ್ತಿರುವವರು ಹಾಗೂ ಭದ್ರತಾ ಪಡೆಗಳ ನಡುವಿನ ಸಂಘರ್ಷದಲ್ಲಿ ಕನಿಷ್ಠ 105 ಮಂದಿ ಮೃತಪಟ್ಟಿದ್ದು, 2,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Advertisement
ಗುರುವಾರ ಹೋರಾಟ ತೀವ್ರಗೊಂಡ ನಂತರ ಗಲಭೆ ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದಿದ್ದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರರೊಂದಿಗೆ ಘರ್ಷಣೆಗೆ ಇಳಿದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.
Advertisement
ಹಿಂಸಾಚಾರಕ್ಕೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ಪ್ರಧಾನಿಗಳು ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.