ನವದೆಹಲಿ: ಪೊಲೀಸರು ವಶಪಡಿಸಿಕೊಂಡಿದ್ದ 350ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ದೆಹಲಿಯ ಸಾಗರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡಿದ್ದ ವಾಹನ ಹಾಗೂ ಸರಕುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 350ಕ್ಕೂ ಹೆಚ್ಚು ವಾಹನಗಳು ಸುಟ್ಟು ಹೋಗಿವೆ ಎಂದು ಉಪ ಪೊಲೀಸ್ ಆಯುಕ್ತ ಗೌರವ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಅನ್ವೇಷಣೆಯ ಹಾದಿಯಲ್ಲಿ ಸೋಲಿಗೆ ಹೆದರಬೇಡಿ: ಯುವ ವಿಜ್ಞಾನಿ ಗೀತಾಂಜಲಿ ರಾವ್
Advertisement
Advertisement
ಪೊಲೀಸ್ ಠಾಣೆಯ ಹೊರಗಡೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಅಧಿಕಾರಿಗಳು ತಕ್ಷಣ ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದರು. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹಲವು ಗಂಟೆಗಳ ವರೆಗೆ ಪ್ರಯತ್ನ ಪಟ್ಟಿದ್ದಾರೆ. ಇದನ್ನೂ ಓದಿ: ಸುಡುಮದ್ದು ಸ್ಫೋಟಕ್ಕೆ ಯುವಕ ಬಲಿ
Advertisement
ಬೆಂಕಿ ನಂದಿಸುವಷ್ಟರಲ್ಲಿ 250 ದ್ವಿಚಕ್ರ ವಾಹನಗಳು ಹಾಗೂ 100 ಕಾರುಗಳು ಸುಟ್ಟು ಹೋಗಿದ್ದವು. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್) ತಂಡ ಆಗಮಿಸಿ ಬೆಂಕಿಗೆ ಕಾರಣ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.