ನವದೆಹಲಿ: ಇಡೀ ದೇಶದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಜನವರಿ 3 ರಂದು ಕೋವ್ಯಾಕ್ಸಿನ್ ಮೊದಲ ಡೋಸ್ ನೀಡಲು ಪ್ರಾರಂಭಿಸಲಾಗಿದೆ. 15 ರಿಂದ 18 ವರ್ಷದ ಮಕ್ಕಳಿಗೆ ಸೋಮವಾರ ಲಸಿಕೆಗೆ ಚಾಲನೆ ನೀಡಲಾಗಿತ್ತು.
ಮೊದಲ ದಿನದಂದೇ 40 ಲಕ್ಷಕ್ಕೂ ಅಧಿಕ ಮಕ್ಕಳು ಲಸಿಕೆಯನ್ನು ಪಡೆದಿದ್ದಾರೆ ಎಂದು ಕೋವಿನ್ ಪೋರ್ಟಲ್‌ನಲ್ಲಿ ವರದಿಯಾಗಿದೆ. ಮೊದಲ ದಿನ 39.88 ಲಕ್ಷ ಮಕ್ಕಳು ಸೋಮವಾರ ಮಧ್ಯಾಹ್ನದವರೆಗೆ ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ತೀವ್ರವಾಗಿ ಹರಡುತ್ತಿರುವ ಕೋವಿಡ್ ರೂಪಾಂತರಿ ಓಮಿಕ್ರಾನ್ ಭೀತಿಯಿಂದಾಗಿ 15 ರಿಂದ 18 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಯಿತು. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ
Advertisement
Advertisement
ಕರ್ನಾಟಕದಲ್ಲಿ ಮೊದಲ ದಿನ 4 ಲಕ್ಷಕ್ಕೂ ಹೆಚ್ಚು ಮಕ್ಕಳು ಲಸಿಕೆಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಮೊದಲ ದಿನ 6.3 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿ ಹೊಂದಿತ್ತು. ಇದರಲ್ಲಿ ಶೇ.65 ಮಕ್ಕಳು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣಕ್ಕೆ ಕೊರೊನಾತಂಕ – ಓಂ ಶಕ್ತಿ ದೇಗುಲಕ್ಕೆ ಹೋಗಿ ಬಂದ 30 ಮಂದಿಗೆ ಪಾಸಿಟಿವ್