ಲಕ್ನೋ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವಹೇಳನಕಾರಿ ಹೇಳಿಕೆ ಖಂಡಿಸಿ, ವಿವಿಧೆಡೆ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 400ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
Advertisement
ಉತ್ತರ ಪ್ರದೇಶ, ಜಾರ್ಖಂಡ್ ಸೇರಿದಂತೆ ಹಲವೆಡೆ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಬೆಥುಯಾದಹರಿ ರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರ ಗುಂಪು ರೈಲುವೊಂದಕ್ಕೂ ಹಾನಿ ಮಾಡಿತ್ತು. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ
Advertisement
ಸದ್ಯ ಉತ್ತರ ಪ್ರದೇಶದ 8 ಜಿಲ್ಲೆಗಳಲ್ಲಿ ಒಟ್ಟು 316 ಮಂದಿ, ಪಶ್ಚಿಮ ಬಂಗಾಳದ ಹೌರಾ, ಮುರ್ಷಿದಾಬಾದ್ ಜಿಲ್ಲೆಯಲ್ಲಿ 100 ಜನರನ್ನು ಬಂಧಿಸಲಾಗಿದೆ. ರಾಂಚಿಯಲ್ಲಿ 25 ಸೇರಿದಂತೆ ಒಟ್ಟಾರೆ ಪ್ರಕರಣದಲ್ಲಿ 42 ಎಫ್‌ಐಆರ್ ದಾಖಲಾಗಿವೆ.
Advertisement
Advertisement
ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 13 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಎಂಟು ಜಿಲ್ಲೆಗಳಲ್ಲಿ 304 ಜನರನ್ನು ಬಂಧಿಸಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ 91 ಮಂದಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್
ಅದೇರೀತಿ, ಸಹರಾನ್‌ಪುರದಲ್ಲಿ 71, ಹತರಾಸ್‌ನಲ್ಲಿ 51, ಫಿರೋಜಾಬಾದ್‌ನಲ್ಲಿ 15, ಅಂಬೇಡ್ಕರ್‌ನಗರ ಮತ್ತು ಮೊರಾದಾಬಾದ್‌ನಲ್ಲಿ ತಲಾ 34 ಜನರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಮಾಹಿತಿ ನೀಡಿದ್ದಾರೆ.