ಮಂಡ್ಯ: ಮಂಡ್ಯ (Mandya) ರೈಲ್ವೆ ನಿಲ್ದಾಣದ (Railway Station) ಬಳಿ ಗಂಟು-ಮೂಟೆ ಸಮೇತ ಅನುಮಾನಾಸ್ಪದವಾಗಿ ಬಂದಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಬಿಜೆಪಿ ಕಾರ್ಯಕರ್ತರು ತಡೆದು ಪ್ರಶ್ನಿಸಿದ ಘಟನೆ ನಡೆದಿದೆ. ಈ ವೇಳೆ ಅವರ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಪರಿಶೀಲನೆ ನಡೆಸಲಾಗಿದೆ.
ಪರಿಶೀಲನೆ ವೇಳೆ ಹಲವರ ಬಳಿ ಪಶ್ಚಿಮ ಬಂಗಾಳ ಮೂಲದ ಆಧಾರ್ ಕಾರ್ಡ್ ಇರುವುದು ಕಂಡುಬಂದಿದೆ. ಇದರಿಂದ ಸ್ಥಳದಲ್ಲಿ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ಕಾರ್ಯಕರ್ತರು ಹೆಚ್ಚಿನ ಮಾಹಿತಿ ಕೇಳುತ್ತಿದ್ದಂತೆ ಕೆಲವರು ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ.
ಈ ವಲಸಿಗರು ಬಾಂಗ್ಲಾದೇಶದಿಂದ ಮಂಡ್ಯಕ್ಕೆ ಬಂದಿರಬಹುದೆಂಬ ಅನುಮಾನವನ್ನು ಬಿಜೆಪಿ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಆದರೆ, ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಹೊರಬಿದ್ದಿಲ್ಲ.ಇದನ್ನೂ ಓದಿ: ಭಾರೀ ಮಳೆಯಿಂದ ಹಿಡಕಲ್ ಜಲಾಶಯ ಭರ್ತಿ; ಹುನ್ನೂರು ವಿಠ್ಠಲ ದೇವಸ್ಥಾನ ಮುಳುಗಡೆ
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆ ವ್ಯಕ್ತಿಗಳ ಗುರುತು, ಅವರು ಎಲ್ಲಿಂದ ಬಂದಿದ್ದಾರೆ ಹಾಗೂ ಮಂಡ್ಯಕ್ಕೆ ಬಂದ ಉದ್ದೇಶವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಪೊಲೀಸರ ತನಿಖೆ ಪೂರ್ಣಗೊಂಡ ಬಳಿಕವೇ ಅವರು ಭಾರತೀಯ ಪ್ರಜೆಗಳೇ ಅಥವಾ ವಿದೇಶಿ ಪ್ರಜೆಗಳೇ ಎಂಬುದು ಸ್ಪಷ್ಟವಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಮಗುವನ್ನ ನೆಲಕ್ಕೆ ಬಡಿದು ಕೊಂದಿದ್ದ ಆರೋಪಿಗೆ 40 ದಿನದಲ್ಲಿ ಗಲ್ಲು ಶಿಕ್ಷೆ ಪ್ರಕಟ
