ನವದೆಹಲಿ: 2022-23ರ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿ ಈ ವಿವರಗಳನ್ನು ಹಂಚಿಕೊಂಡಿದ್ದಾರೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಕಲಿ ಜಾಬ್ ಕಾರ್ಡ್‌ಗಳನ್ನು ತೆಗೆದುಹಾಕುವಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. 2021-22 ರಲ್ಲಿ 3,06,944 ನಕಲಿ ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿತ್ತು. ಆದರೆ ಈ ಬಾರಿ ಅದರ ಸಂಖ್ಯೆ 7,43,457 ಕ್ಕೆ ಏರಿಕೆಯಾಗಿದೆ.
ಈ ಪ್ರಕ್ರಿಯೆಯಲ್ಲಿ ಉತ್ತರ ಪ್ರದೇಶದಲ್ಲಿ 2.96 ಲಕ್ಷಕ್ಕೂ ಹೆಚ್ಚು ನಕಲಿ ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿದೆ. ಇದು ದೇಶದಲ್ಲೇ ಅತಿ ಹೆಚ್ಚು ಎಂದು ವರದಿಯಾಗಿದೆ. ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಒದಗಿಸಿರುವ ವಿವರದಲ್ಲಿ, ಉತ್ತರ ಪ್ರದೇಶದಲ್ಲಿ 2,96,464 ನಕಲಿ ಜಾಬ್ ಕಾರ್ಡ್‌ಗಳನ್ನು ಅಳಿಸುವ ಮೂಲಕ ದೇಶದಲ್ಲೆ ಅಗ್ರ ಸ್ಥಾನದಲ್ಲಿದೆ. ಒಡಿಶಾದಲ್ಲಿ 1,14,333 ನಕಲಿ ಜಾಬ್ ಕಾರ್ಡ್ ಅಳಿಸುವ ಮೂಲಕ ನಂತರದ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್
ಜಾಬ್ ಕಾರ್ಡ್‌ಗಳನ್ನು ಅಳಿಸುವ ಮತ್ತು ಅಪ್ಡೇಟ್ ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. MGNREGA ಕಾಯಿದೆಯ ಸೆಕ್ಷನ್ 25ರ ಪ್ರಕಾರ ಇದನ್ನು ಉಲ್ಲಂಘಿಸುವವರು 1,000 ರೂ.ವರೆಗೆ ದಂಡವನ್ನು ಕಟ್ಟಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್