ನವದೆಹಲಿ: ದ್ವೇಷದ ಬುಲ್ಡೋಜರ್ಗಳನ್ನು ಆಫ್ ಮಾಡಿ ವಿದ್ಯುತ್ ಸ್ಥಾವರಗಳನ್ನು ಆನ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದರು.
ದೆಹಲಿ ಮತ್ತು ಮಧ್ಯಪ್ರದೇಶದ ಹಿಂಸಾಚಾರ ನಡೆದ ಪ್ರದೇಶಗಳಲ್ಲಿ ಬುಲ್ಡೋಜರ್ಗಳ ಬಳಸಿ ತೆರವುಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದರು.
Advertisement
Advertisement
ಟ್ವೀಟ್ನಲ್ಲಿ ಏನಿದೆ?: ಎಂಟು ವರ್ಷಗಳ ಚರ್ಚೆಯ ಪರಿಣಾಮವಾಗಿ ಭಾರತದಲ್ಲಿ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಇದೆ. ಮೋದಿಜೀ ಅವರೇ ಈ ವಿಷಯ ದಿಗ್ಭ್ರಮೆ ಉಂಟಾಗುತ್ತಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಸಣ್ಣ ಕೈಗಾರಿಕೆಗಳ ಮೇಲೆ ಅಗಾಧವಾಗಿ ಪರಿಣಾಮ ಬೀರುತ್ತಿದೆ. ಇದರ ಜೊತೆಗೆ ಅವರು ಹೆಚ್ಚು ನಷ್ಟವನ್ನು ಅನುಭವಿಸಬೇಕಾದ ಪರಿಸ್ಥಿತಿಯೂ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
8 years of big talk has resulted in India having ONLY 8 DAYS of coal stocks.
Modi ji, stagflation is looming. Power cuts will crush small industries, leading to more job losses.
Switch off the bulldozers of hate and switch on the power plants! pic.twitter.com/CiqP9SlHMx
— Rahul Gandhi (@RahulGandhi) April 20, 2022
ದ್ವೇಷದ ಬುಲ್ಡೋಜರ್ಗಳನ್ನು ಆಫ್ ಮಾಡಿ ಮತ್ತು ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ ಎಂದು ಅವರು, ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕಡಿಮೆಯಾಗಿರುವ ವರದಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್
Advertisement
ಭಾರತದಲ್ಲಿ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಉಳಿದಿದೆ. ಬಿಜೆಪಿಯ ದ್ವೇಷದ ರಾಜಕೀಯದಿಂದಾಗಿ ಬೀದಿಗಳಲ್ಲಿ ಉರಿಯುತ್ತಿರುವ ಬೆಂಕಿಯು ಮನೆಗಳನ್ನು ಬೆಳಗಿಸುವುದಿಲ್ಲ ಎಂದು ಕಾಂಗ್ರೆಸ್ ಹಂಚಿಕೊಂಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ