ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜಿನ ಪರಿಣಾಮ 80ಕ್ಕೂ ಹೆಚ್ಚು ವಿಮಾನಗಳು (Flight) ಹಾಗೂ ಹಲವಾರು ರೈಲುಗಳ (Train) ಪ್ರಯಾಣದಲ್ಲಿ ವ್ಯತ್ಯಯವಾಗಿದೆ.
#watch | A layer of dense fog engulfs Jaipur, Rajasthan; visuals shot at 7:30 am pic.twitter.com/UdXiBUuARg
— ANI (@ANI) December 30, 2023
Advertisement
ಇಂದು ದೆಹಲಿ-ಎನ್‌ಸಿಆರ್‌ನ (Delhi- NCR) ಹಲವು ಪ್ರದೇಶಗಳಲ್ಲಿ ಸಾಧಾರಣ ಮಂಜಿನ ಜೊತೆಗೆ ಶೀತ ಹವಾಮಾನ ಪರಿಸ್ಥಿತಿ ಎದುರಾಗಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನ 10.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಭಾರತದಲ್ಲಿ ದಟ್ಟವಾದ ಮಂಜು (Fog) ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: 5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು
Advertisement
Advertisement
ಈ ಸಂಬಂಧ IMD ತನ್ನ ಎಕ್ಸ್‌ನಲ್ಲಿ ಪಂಜಾಬ್, ಹರಿಯಾಣ, ದೆಹಲಿ ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದೆ. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಿ. ಅಲ್ಲದೆ ಚಾಲನೆಯ ವೇಳೆ ವಾಹನದ ಲೈಟ್ ಆನ್ ಮಾಡಿಕೊಳ್ಳಿ. ಇನ್ನು ನಿಮ್ಮ ಪ್ರಯಾಣಕ್ಕಾಗಿ ವಿಮಾನಯಾನ, ರೈಲ್ವೆ ಮತ್ತು ರಾಜ್ಯ ಸಾರಿಗೆಯೊಂದಿಗೆ ಸಂಪರ್ಕದಲ್ಲಿರಿ ಎಂದು ತಿಳಿಸಿದೆ.
Advertisement
#WATCH | Punjab: A layer of dense fog engulfs Mohali city; visuals from Sector 78 shot at 08:30 am pic.twitter.com/JmVhbrGMUK
— ANI (@ANI) December 30, 2023
ಹವಾಮಾನ ವೈಪರೀತ್ಯದಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport in Delhi) ಇಂದು ಬೆಳಗ್ಗೆ 8.30 ರವರೆಗೆ 80 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ ಎಂದು ವರದಿಯಾಗಿದೆ. ಕಡಿಮೆ ಗೋಚರತೆಯಿಂದಾಗಿ ಮತ್ತೆ ವಿಮಾನಗಳು ಮತ್ತು ರೈಲು ಪ್ರಯಾಣದಲ್ಲಿ ವಿಳಂಬವಾಗಿದೆ. ದಟ್ಟ ಮಂಜಿನ ವಾತಾವರಣದಿಂದಾಗಿ ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಮತ್ತು ಬರುವ ಪ್ರಯಾಣಿಕರು ಸಹ ತೊಂದರೆಗಳನ್ನು ಎದುರಿಸಿದರು.
ಈ ಸಂಬಂಧ ದೆಹಲಿಯಿಂದ ಸಿಕ್ಕಿಂಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು , ಮಂಜು ಮತ್ತು ಹವಾಮಾನ ಪರಿಸ್ಥಿತಿಗಳಿಂದಾಗಿ ನಮ್ಮ ವಿಮಾನವು ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ನಿನ್ನೆಗೆ ಹೋಲಿಸಿದರೆ ಇಂದು ಮಂಜು ಸ್ವಲ್ಪ ಉತ್ತಮವಾಗಿದೆ ಎಂದು ಆಟೋ, ಕ್ಯಾಬ್ ಚಾಲಕರು ತಿಳಿಸಿದ್ದಾರೆ. ಈ ನಡುವೆ ದೆಹಲಿ-ಎನ್‌ಸಿಆರ್‌ನಾದ್ಯಂತ ಕಠಿಣ ಹವಾಮಾನ ಪರಿಸ್ಥಿತಿಗಳ ಮಧ್ಯೆ, ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವದ ಪರೇಡ್‌ಗೆ ಸಿದ್ಧತೆಗಳು ಭರದಿಂದ ಸಾಗಿವೆ.