ನವದೆಹಲಿ: ಸಿಐಎಸ್‍ಎಫ್ (Central Industrial Security Force) ಅಧಿಕಾರಿಗಳು ದೆಹಲಿಯ ಕಾಶ್ಮೇರ್ ಮೆಟ್ರೋ ನಿಲ್ದಾಣದ ಗೇಟ್ ಬಳಿ 500 ರೂ. ಮುಖಬೆಲೆಯ 4,64,000 ರೂ. ಮೊತ್ತದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಶನಿವಾರ ಸಂಜೆ 5.30ಕ್ಕೆ ಕಾಶ್ಮೇರ್ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 8ರಲ್ಲಿ ಅನುಮಾನಸ್ಪಾದ ಬ್ಯಾಗ್ ಪತ್ತೆಯಾಗಿತ್ತು. ಕೂಡಲೇ ನಿಲ್ದಾಣದ ಭದ್ರತಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಸಬ್ ಇನ್‍ಸ್ಪೆಕ್ಟರ್ ಬೀರೇಂದ್ರ ಕುಮಾರ್ ಸ್ಥಳೀಯ ಪೊಲೀಸರಿಗೆ ಮತ್ತು ಬಾಂಬ್ ನಿಷ್ಕಿಯ ತಂಡಕ್ಕೆ ಮಾಹಿತಿ ರವಾನಿಸಿದ್ದಾರೆ.
ಬ್ಯಾಗ್ ಪತ್ತೆಯಾದ ಕೂಡಲೇ ಗೇಟ್ ನಂಬರ್ 8 ರಲ್ಲಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬ್ಯಾಗ್ ಪರಿಶೀಲನೆ ನಡೆಸಿದಾಗ ನಕಲಿ ನೋಟುಗಳ ಕಂತೆ ಪತ್ತೆಯಾಗಿದೆ. ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮೆಟ್ರೋ ನಿಲ್ದಾಣದ ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
Central Industrial Security Force (CISF): CISF recovered a bag containing fake currency notes with face value of Rs 4,64,000 (in denomination of Rs 500 note), lying unattended near gate no.8 of Kashmiri Gate Metro Station in Delhi. It was handed over to Delhi Metro Rail Police. pic.twitter.com/sDhjP5SpCp
— ANI (@ANI) October 20, 2019
ಇಂದು ಸಿಐಎಸ್‍ಎಫ್ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದು, ಬ್ಯಾಗಿನಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ದೊರೆತಿಲ್ಲ. ಬ್ಯಾಗಿನಲ್ಲಿ 500 ರೂ. ಮುಖಬೆಲೆಯ 4.64 ಲಕ್ಷ ರೂ. ನಕಲಿ ನೋಟು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ.