ಮಂಡ್ಯ: ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.
ಹಾಸನ ಮೂಲದ ಮೂವತ್ತು ವರ್ಷದ ತಮ್ಮಯ್ಯ ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದು, ತಮ್ಮಯ್ಯ ಅವರು ತರಕಾರಿ ಮಾರಾಟ ಮಾಡಿ ವಾಪಸ್ ಬರುತ್ತಿದ್ದ ವೇಳೆ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪಂಚರ್ ಆಗಿದ್ದ ಕಾರಣ ಕ್ಯಾಂಟರ್ ವಾಹನವನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಬರುತ್ತಿದ್ದ ಬೊಲೆರೊ ವಾಹನ ಕ್ಯಾಂಟರ್ ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೊಲೆರೊ ವಾಹನದಲ್ಲಿದ್ದ ತಮ್ಮಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನೂ ಬೊಲೆರೋ ಚಾಲಕ ಮೋಹನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬಿಜಿ ನಗರದ ಎಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.