Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

Bengaluru City

ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

Public TV
Last updated: August 26, 2025 9:03 am
Public TV
Share
2 Min Read
DK Shivakumar Bengaluru Potholes Check
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ (BBMP) ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾಮಗಾರಿ ಪರಿಶೀಲನೆ ಮಾಡಿದ್ದಾರೆ.

ಯಲಹಂಕದ ಬಾಗಲೂರು ಮುಖ್ಯರಸ್ತೆ, ಎಂಎಸ್ ಪಾಳ್ಯದ ಸಂದೀಪ್ ಉಣ್ಣೀಕೃಷ್ಣನ್ ರೋಡ್ ಮತ್ತು ಈಜಿಪುರದ ಪ್ಲೈಓವರ್ ಕಾಮಗಾರಿಯ ವೀಕ್ಷಣೆ ಮಾಡಿದ ಡಿಕೆಶಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

DK Shivakumar Bengaluru Potholes Check 1

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆಪ್‌ನಲ್ಲಿ ನಾಗರೀಕರು ದೂರುಗಳನ್ನು ಸಲ್ಲಿಸುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಈ ಗಣೇಶೋತ್ಸವಕ್ಕೆ ವಿಘ್ನ ವಿನಾಶಕನ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ…

DK Shivakumar Bengaluru Potholes Check 2

ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್‌ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು – ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

ರಸ್ತೆ ನಿರ್ಮಾಣ ಮಾಡುವಾಗ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕಲ್ಲವೇ ಎಂಬ ಪ್ರಶ್ನೆಗೆ, ಭಾರೀ ವಾಹನಗಳ ಓಡಾಟ, ಮಳೆಗಾಲ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಇರುತ್ತವೆ. ಅದಕ್ಕಾಗಿ ಹಂತ-ಹಂತವಾಗಿ ಕಾಂಕ್ರಿಟ್ ರಸ್ತೆ ಮಾಡಲಾಗುತ್ತಿದೆ. ಇದು 30 ವರ್ಷ ಬಾಳಿಕೆ ಬರಲಿದೆ ಎಂದು ಹೇಳಿದರು. ಇದನ್ನೂ ಓದಿ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಗಗನಕ್ಕೇರಿದ ಹೂವುಗಳ ದರ

ಗುಂಡಿಗಳಿಂದಲೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಹೆಣ್ಣು ಮಕ್ಕಳನ್ನು, ಚಿಕ್ಕ ಮಕ್ಕಳನ್ನು ಕರೆದೊಯ್ಯುವಾಗ ತೊಂದರೆಗಳಾಗುವುದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ರಸ್ತೆ ಗುಂಡಿಗಳ ಮೇಲ್ಚಿಚಾರಣೆಗಾಗಿಯೇ ರಸ್ತೆ ಗುಂಡಿ ಗಮನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ’ ಎಂದರು. ಇದನ್ನೂ ಓದಿ: ಮೋದಿ ಸರ್ಕಾರದ ಕ್ರಾಂತಿಕಾರಿ ನಡೆ – ರಾಜಕಾರಣ ಶುದ್ಧೀಕರಣಕ್ಕೆ ಹೊಸ ಮಸೂದೆ!

TAGGED:bbmpbengaluruDK Shivakumarroad workಡಿಕೆ ಶಿವಕುಮಾರ್ಬಿಬಿಎಂಪಿಬೆಂಗಳೂರುರಸ್ತೆ ಕಾಮಗಾರಿ
Share This Article
Facebook Whatsapp Whatsapp Telegram

Cinema news

Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood
Rashmika Mandanna Srilanka Trip
2 ದಿನ ರಜೆ ಸಿಕ್ತು ಅಂತ ರಶ್ಮಿಕಾ ಹೋಗಿದ್ದೆಲ್ಲಿಗೆ..?
Cinema Latest Top Stories
Shilpa shetty 2
ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ
Bengaluru City Bollywood Districts Karnataka Latest Main Post
sri murali 2
42ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ
Cinema Latest Sandalwood

You Might Also Like

ramalinga reddy
Belgaum

15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‍ಗೆ ಸರ್ಕಾರದಿಂದ ಅನುಮೋದನೆ: ರಾಮಲಿಂಗಾರೆಡ್ಡಿ

Public TV
By Public TV
19 seconds ago
belagavi session 1
Belgaum

ಸದನದಲ್ಲಿ ‘ಗೃಹಲಕ್ಷ್ಮಿ’ ಗದ್ದಲ – ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

Public TV
By Public TV
18 minutes ago
Mallikarjun Kharge 2
Latest

ಪ್ರಧಾನಿ ಮೋದಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಖರ್ಗೆ ಒತ್ತಾಯ

Public TV
By Public TV
1 hour ago
Lakshmi Hebbalkar
Belgaum

2 ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ – ʻಪಬ್ಲಿಕ್‌ ಟಿವಿʼ ವರದಿ ಬಳಿಕ ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Public TV
By Public TV
1 hour ago
rowdy sheeter mangaluru
Crime

ಮಂಗಳೂರು| ಎಸ್ಕೇಪ್‌ ಆಗುತ್ತಿದ್ದ ರೌಡಿಶೀಟರ್‌ನ ಚೇಸ್‌ ಮಾಡಿ ಹಿಡಿದ ಪೊಲೀಸರು

Public TV
By Public TV
2 hours ago
Ramamurthy Nagar Police Station
Bengaluru City

Chinni Love U…U Must Love Me – ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?