ಮೈಸೂರು: ಊಟಿ ಮುಖ್ಯ ರಸ್ತೆಯಲ್ಲಿನ ವಿವಾದಿತ ಬಸ್ ನಿಲ್ದಾಣಕ್ಕೆ ರಾತ್ರೋರಾತ್ರಿ ನಾಮಫಲಕ ಅಳವಡಿಕೆಯಾಗಿದೆ.
ಮೈಸೂರಿನ (Mysuru) ಊಟಿ ಮುಖ್ಯ ರಸ್ತೆಯಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಈ ಬಸ್ ನಿಲ್ದಾಣಕ್ಕೆ ರಾತ್ರೋ, ರಾತ್ರಿ ಜೆಎಸ್‍ಎಸ್ (JSS) ಕಾಲೇಜ್ ಬಸ್ ನಿಲ್ದಾಣ ಎಂದು ನಾಮಫಲಕ ಅಳವಡಿಸಲಾಗಿದೆ. ಅಲ್ಲದೇ ಫಲಕದ ಒಂದು ಬದಿಯಲ್ಲಿ ಸುತ್ತೂರು ಆದಿ ಜಗದ್ಗುರುಗಳ ಹಾಗೂ ಸುತ್ತೂರು ಶ್ರೀ ರಾಜೇಂದ್ರ ಸ್ವಾಮೀಜಿಗಳ ಫೋಟೋ ಹಾಕಲಾಗಿದ್ದು, ಮತ್ತೊಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (BasavrajBommai) ಫೋಟೋವನ್ನು ಹಾಕಲಾಗಿದೆ.
Advertisement
Advertisement
ಬಸ್ ನಿಲ್ದಾಣ ತೆರವಿಗೆ ಸಂಸದ ಪ್ರತಾಪ್ ಸಿಂಹ (Pratap Simha) ಕೊಟ್ಟ ಡೆಡ್ ಲೈನ್ ಇವತ್ತು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಈ ಬದಲಾವಣೆ ನಡೆದಿದೆ. ಇದನ್ನೂ ಓದಿ: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ
Advertisement
Advertisement
ಸೋಮವಾರ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದ ಪ್ರತಾಪ್ ಸಿಂಹ ಅವರು, ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ದರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಪಾರಂಪರಿಕವಾಗಿ ಗುಂಬಜ್ ನಿರ್ಮಾಣ – ತಜ್ಞರನ್ನು ಕಳಿಸಲು ಸರ್ಕಾರಕ್ಕೆ ರಾಮದಾಸ್ ಪತ್ರ