ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದರು.
ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಯುಪಿಎ ಅವಧಿಗಿಂತ ದುಪ್ಪಟ್ಟು ಅನುದಾನವನ್ನು ಎನ್‌ಡಿಎ (NDA) ಸರ್ಕಾರ ನೀಡಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆ ನಿರ್ಧರಿಸುವುದು ಕೇಂದ್ರ ಸರ್ಕಾರ ಮಾಡಿಲ್ಲ.ಹಣಕಾಸು ಆಯೋಗ ನಿಗದಿಪಡಿಸಿದಷ್ಟು ಹಣವನ್ನು ಕೇಂದ್ರ ನೀಡಿದೆ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ಕೋಡಿ ಬಿದ್ದ ಕರೆಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಯುವಕ ಸಾವು
2016-17ರಲ್ಲಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪಂಜಾಬ್| ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
ತಮ್ಮ ಸರ್ಕಾರದಲ್ಲಿನ ಅಧಿಕಾರಿಗಳೇ ತಪ್ಪು ಮಾಡಿದ್ದಾರೆ ಎಂಬುದನ್ನು ಸಿಎಂ ಒಪ್ಪಿಕೊಂಡಿದ್ದಾರೆ ಎಂದ ಅವರು, ಈಗಲಾದರೂ ಹಣಕಾಸು ಆಯೋಗದ ಮುಂದೆ ಸರಿಯಾದ ವಾದ ಮಂಡಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್
ಮತ್ತೆ ಆಯೋಗ ರಚನೆ, ಬೇಡಿಕೆ ಮುಂದಿಡಿ: ಪ್ರತಿ ಐದು ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚಿಸುತ್ತಿದ್ದು, ಈಗ ಮತ್ತೊಮ್ಮೆ ರಚನೆ ನಡೆದಿದೆ. ಹೊಸ ಹಣಕಾಸು ಆಯೋಗದ ಮುಂದಾದರೂ ರಾಜ್ಯಕ್ಕೆ ಏನು ಬೇಕೆಂಬುದನ್ನು ಸರಿಯಾಗಿ ಮಂಡಿಸಿ ಎಂದು ಹೇಳಿದರು.
ಹಾಗೆ ನೋಡಿದರೆ ರಾಜ್ಯಕ್ಕೆ ಯುಪಿಎಗಿಂತ ಎನ್‌ಡಿಎ ಸರ್ಕಾರವೇ ಹೆಚ್ಚು ಹಣಕಾಸು ಒದಗಿಸಿದೆ. ಯುಪಿಎ (UPA) ಅವಧಿಯಲ್ಲಿ ಕರ್ನಾಟಕಕ್ಕೆ 49 ಕೋಟಿ ರೂ. ಗ್ರ್ಯಾಂಟೆಡ್ ಅನುದಾನ ಬಂದಿದ್ದರೆ, ಎನ್‌ಡಿಎ ಸರ್ಕಾರ 3 ಕೋಟಿ ರೂ. ಕೊಟ್ಟಿದೆ. ಇನ್ನೂ ರಾಜ್ಯದ ಪಾಲಿನ ತೆರಿಗೆ ಬಾಬ್ತು ಯುಪಿಎ ಬರೀ 63 ಕೋಟಿ ರೂ. ಕೊಟ್ಟಿದ್ದರೆ, ತಮ್ಮ ಸರ್ಕಾರ 3.25 ಕೋಟಿ ರೂ. ತೆರಿಗೆ ಹಂಚಿಕೆ ಬಿಡುಗಡೆ ಮಾಡಿದೆ ಎಂದರು. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ಮಳೆ ಜಾಸ್ತಿ ಆದ್ರೂ ಬಿಜೆಪಿ (BJP) ಮಾಡಿಸಿದೆ ಅಂದಿಲ್ಲ ಅದೇ ಪುಣ್ಯ: ರಾಜ್ಯಕ್ಕೆ ಏನಾದರೂ ಒಳ್ಳೆಯದಾದರೆ ತಮ್ಮಿಂದ ಆಯಿತು, ಕೆಟ್ಟದ್ದಾದರೆ ಬಿಜೆಪಿ ಮಾಡಿತು ಎಂಬ ವಾಚಾಳಿತನ ಕಾಂಗ್ರೆಸ್‌ಗೆ ರೂಢಿಗತವಾಗಿದೆ. ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲ ಅದೇ ನಮ್ಮ ಪುಣ್ಯ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಗದಗ| ಭಾರೀ ಮಳೆಗೆ ಮಲಪ್ರಭಾ ನದಿ, ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ