ವಿಜಯಪುರ: ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ, ಮಾಲೀಕನಿಗೆ 26 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೈಕ್ ಮಾಲೀಕನನ್ನು ಶಹಾಪುರ್ ಅಗಸಿ ನಿವಾಸಿ ಹುಸೇನ್‌ಸಾಬ್ ರಾಂಪುರ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿ ಹುಸೇನ್‌ಸಾಬ್ ಬೈಕ್‌ನ್ನು ಚಲಾಯಿಸುತ್ತಿದ್ದ.ಇದನ್ನೂ ಓದಿ: Karnataka Budget 2025 | ಕೊಡಗು ಜಿಲ್ಲೆಯ ಆಸ್ಪತ್ರೆಗಳ ಅಭಿವೃದ್ಧಿಗೆ ಸಿಎಂ ಆದ್ಯತೆ
ಅಪ್ರಾಪ್ತ ಬೈಕ್ ಚಲಾಯಿಸುತ್ತಿರುವುದನ್ನು ರೈಲ್ವೇ ಪಿಎಸ್‌ಐ ಶಿವನಾಂದ ಅರೇನಾಡ ಗಮನಿಸಿದ್ದರು. ಬೈಕ್ ಚಲಾಯಿಸುತ್ತಿದ್ದ ಅಪ್ರಾಪ್ತನ ಬಗ್ಗೆ ಪಿಎಸ್‌ಐ ಮಾಹಿತಿ ಕಲೆಹಾಕಿದ್ದು, 2024ರ ನವೆಂಬರ್ 16ರಂದು ಸಂಚಾರಿ ನಿಯಮ ಉಲ್ಲಂಘನೆ ಅಡಿ ಹುಸೇನ್‌ಸಾಬ್ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ 4ನೇ ಹೆಚ್ಚುವರಿ ದಿವಾಣಿ ಮತ್ತು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು.
ವಿಚಾರಣೆ ನಡೆಸಿದ ಕೋರ್ಟ್ ಅಪ್ರಾಪ್ತನಿಗೆ ಬೈಕ್ ನೀಡಿದ್ದಕ್ಕಾಗಿ ಮಾಲೀಕನಿಗೆ ದಂಡ ವಿಧಿಸಲಾಗಿದ್ದು, ಬರೋಬ್ಬರಿ 26,500 ರೂ. ದಂಡ ಪಾವತಿಸುವಂತೆ ನ್ಯಾಯಾಧೀಶ ಚಂದ್ರಕಾಂತ್ ಅವರು ಆದೇಶಿಸಿದ್ದಾರೆ.ಇದನ್ನೂ ಓದಿ: ಕನ್ನಡ ಚಿತ್ರದಲ್ಲಿ ನಟಿಸಲಿದ್ದಾರೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್