ಹುಬ್ಬಳ್ಳಿ: ಈದ್ಗಾ ಮೈದಾನದ ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ನಿರತರಾಗಿರುವುದನ್ನು ಅರಿತು, ಮನೆಯಲ್ಲಿದ್ದ ಆರು ಜನರ ಕೈಕಾಲು ಕಟ್ಟಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಪ್ರಕರಣ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್‍ನಲ್ಲಿ ನಡೆದಿದೆ.
ಬುಕ್ ಡಿಪೋ ಮಾಲೀಕ ಉಲ್ಲಾಸ್ ದೊಡ್ಡಮನಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ದರೋಡೆಕೋರರು ಕಿಟಕಿಯ ಸರಳುಗಳನ್ನು ಕತ್ತರಿಸಿ ಮನೆ ಒಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದವರನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದಾರೆ. ಸುಮಾರು 8 ಜನ ದರೋಡೆಕೋರರ ಗ್ಯಾಂಗ್ ಕೃತ್ಯದಲ್ಲಿ ಭಾಗಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾದ ಗಣಪತಿ ವಿಸರ್ಜನೆ ವೇಳೆ 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇದರಿಂದ ಹುಬ್ಬಳ್ಳಿ (Hubballi) – ಧಾರವಾಡ (Dharwad) ಪೊಲೀಸರು ಗಸ್ತು ತಿರುಗುತ್ತಿಲ್ಲ ಎಂಬುದನ್ನು ಕಳ್ಳರು ಅರಿತಿದ್ದರು. ಇದೇ ಸಮಯವನ್ನು ಬಳಸಿಕೊಂಡು ದರೋಡೆಗಿಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು (Police) ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಹಾಲಶ್ರೀ ಮಠದಲ್ಲಿ ಮಹಜರು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]