Connect with us

ಚಾಮರಾಜನಗರ ದುರಂತದ ಬೆನ್ನಲ್ಲೇ ತಿರುಪತಿಯಲ್ಲಿ ಆಕ್ಸಿಜನ್ ಸಿಗದೆ 11 ಮಂದಿ ಸಾವು

ಚಾಮರಾಜನಗರ ದುರಂತದ ಬೆನ್ನಲ್ಲೇ ತಿರುಪತಿಯಲ್ಲಿ ಆಕ್ಸಿಜನ್ ಸಿಗದೆ 11 ಮಂದಿ ಸಾವು

– ರಿಸೈನ್ ಜಗನ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್

ಹೈದರಾಬಾದ್: ಕರ್ನಾಟಕದ ಚಾಮರಾಜನಗರದಲ್ಲಿ ನಡೆದ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದ ತಿರುಪತಿಯಲ್ಲಿ ಕೂಡ ಆಕ್ಸಿಜನ್ ಸಿಗದೆ 11 ಮಂದಿ ಕೊರೊನಾ ರೋಗಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.

ಹೌದು. ಎಸ್‍ವಿಆರ್ ಆರ್ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. ಆಕ್ಸಿಜನ್ ಟ್ಯಾಂಕರ್ ಬರುವುದು ತಡವಾಗಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಆಂಧ್ರ ಸರ್ಕಾರ ತನಿಖೆ ನಡೆಸುವಂತೆ ಆದೇಶ ನೀಡಿದೆ.

ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಯಲ್ಲಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ರೋಗಿಗಳಲ್ಲಿ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಕಂಡುಬಂತು. ಕೂಡಲೇ ಬೇರೆ ಕಡೆಯಿಂದ ಆಕ್ಸಿಜನ್ ತರಿಸಲು ವ್ಯವಸ್ಥೆ ಮಾಡಲಾಯಿತು. ಆದರೆ ಆಕ್ಸಿಜನ್ ಟ್ಯಾಂಕರ್ ಆಸ್ಪತ್ರೆಗೆ ಆಗಮಿಸಿದೆ.

ಆಕ್ಸಿಜನ್ ಅನ್ನು ಟ್ಯಾಂಕರ್‍ನಿಂದ ರಿಲೋಡ್ ಮಾಡಲು 5 ನಿಮಿಷ ಬೇಕಾಯಿತು. ಆದರೆ ಈ ಮಧ್ಯೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ರೋಗಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಕೊರೊನಾ ರೋಗಿಗಳು ಆಕ್ಸಿಜನ್ ಸಿಗದೆ ಸುಮಾರು 45 ನಿಮಿಷಗಳ ಕಾಲ ಒದ್ದಾಡಿ ಪ್ರಾಣಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ರೋಗಿಗಳನ್ನು ಉಳಿಸಿಕೊಳ್ಳಲು ನಡೆಸಿದ ಪ್ರಯತ್ನ ವಿಫಲವಾಗಿದೆ ಎಂದು ಚಿತ್ತೂರು ಡಿಸಿ ಎಂ ಹರಿ ನಾರಾಯಣ ತಿಳಿಸಿದ್ದಾರೆ.

ಒಟ್ಟಿನಲ್ಲಿ ತುರ್ತಾಗಿ ಆಕ್ಸಿಜನ್ ಟ್ಯಾಂಕರ್ ತರಿಸಿ ಪೂರೈಕೆ ಮಾಡಿದ್ದರಿಂದ ಉಳಿದ ರೋಗಿಗಳ ಜೀವ ಉಳಿದಿದೆ. ದುರಾದೃಷ್ಟವಶಾತ್ 11 ರೋಗಿಗಳು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ.

ಇತ್ತ ಘಟನೆಯ ಬಳಿಕ ಆಂಧ್ರಪ್ರದೇಶದ ಜನ ಸಿಎಂ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದು, ರಿಸೈನ್ ಜಗನ್ ಹ್ಯಾಶ್ ಟ್ಯಾಗ್ ಹಾಕಿ ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.

Advertisement
Advertisement