ನವದೆಹಲಿ: ಓಯೋ ಹೋಟೆಲ್ (OYO Hotel Rooms) ಬುಕ್ಕಿಂಗ್ ಕಂಪನಿ ಚೆಕ್ ಇನ್‌ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಅದರಂತೆ ಇನ್ಮುಂದೆ ಅವಿವಾಹಿತ ಪುರುಷ – ಮಹಿಳಾ ಜೋಡಿಗೆ (Unmarried Couples) ಹೋಟೆಲ್‌ಗಳಲ್ಲಿ ಅನುಮತಿ ಇರುವುದಿಲ್ಲ ಎಂದು ಹೇಳಿದೆ.
ಹೌದು. ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್ ಬುಕ್ಕಿಂಗ್ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ಗಳು ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್ ಚೆಕ್‌ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ. ಇದನ್ನೂ ಓದಿ: ʻನನ್ನ ಹೆಂಡತಿಗೆ ಪಾಠ ಕಲಿಸಿʼ – ಪತ್ನಿಯ ಕಿರುಕುಳದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ
ಮೀರತ್‌ನಲ್ಲಿ ಜಾರಿ:
ಓಯೋನ ಈ ಹೊಸ ನಿಯಮವು ಮೀರತ್‌ನಲ್ಲಿ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ನಗರಗಳಲ್ಲಿಯೂ ಜಾರಿಗೆ ತರಲಿದೆ.
ಓಯೋ ನಾಗರಿಕ ಸಮಾಜದ ಹಲವು ಗುಂಪುಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಹಲವು ದೂರುಗಳು ಜನಸಾಮಾನ್ಯರಿಂದ ಬಂದಿವೆ. ಹಲವು ನಗರಗಳ ನಿವಾಸಿಗಳು ಅವಿವಾಹಿತರಿಗೆ ಚೆಕ್-ಇನ್ ಮಾಡಲು ಅವಕಾಶ ನೀಡದಂತೆ ಅರ್ಜಿ ಸಲ್ಲಿಸಿದ್ದರು. ಹೀಗೆ ಹಲವು ವಿಚಾರವಾಗಿ ದೂರು ಸ್ವೀಕರಿಸಿದ್ದ ಓಯೋ ಹೊಸ ನಿಯಮ ಜಾರಿಗೆ ತಂದಿದೆ ಎನ್ನಲಾಗಿದೆ. ಇದನ್ನೂ ಓದಿ: ಕಾರಿಗೆ ಟ್ರಕ್ ಡಿಕ್ಕಿ – ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವು
ಐಡಿ ಪ್ರೂಫ್ ಕಡ್ಡಾಯ
ಹೊಸ ನಿಯಮದ ಪ್ರಕಾರ, ಹೊಟೇಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ಸಂಬಂಧದ ದಾಖಲೆ ತರುವುದು ಕಡ್ಡಾಯವಾಗಿದೆ. ಆನ್‌ಲೈನ್ ಬುಕ್ಕಿಂಗ್‌ಗೂ ಕೂಡಾ ಇದು ಕಡ್ಡಾಯವಾಗಿದೆ. ಬೇರೆ ನಗರಗಳಿಗೂ ಇದೆ ನಿಯಮ ವಿಸ್ತರಿಸುವ ಬಗ್ಗೆ ಯೋಚನೆ ಮಾಡಲಾಗುವುದು.
ಒಟ್ಟಾರೆ ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಪದ್ಧತಿಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ ಎಂದು ಓಯೋ ಉತ್ತರ ಭಾರತ ಪ್ರಾದೇಶಿಕ ಮುಖ್ಯಸ್ಥ ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಹಗರಣ ಬಗ್ಗೆ ವರದಿ ಮಾಡಿದ್ದ ಪತ್ರಕರ್ತನ ಶವ ಕಂಟ್ರಾಕ್ಟರ್ ಮನೆಯಲ್ಲಿ ಪತ್ತೆ