ಬೆಂಗಳೂರು: ಪತ್ರಕರ್ತ ಪಿ ಸಾಯಿನಾಥ್ ಅವರು ಚಿತ್ರದುರ್ಗದ ಮುರುಘಾ ಮಠ ನೀಡಿದ್ದ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಸಾಯಿನಾಥ್ ಅವರಿಗೆ 2017 ರಲ್ಲಿ ಮುರುಘಾ ಮಠ ಬಸವಶ್ರೀ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು. ಈಗ ಪ್ರಶಸ್ತಿಯ ಜೊತೆ ಸಿಕ್ಕಿದ 5 ಲಕ್ಷ ರೂ. ಹಣವನ್ನು ವಾಪಸ್ ನೀಡುತ್ತಿದ್ದೇನೆ ಎಂದು ಸಾಯಿನಾಥ್ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಸಾಯಿನಾಥ್ ಹೇಳಿದ್ದೇನು?
ಚಿತ್ರದುರ್ಗದ ಶ್ರೀ ಮುರುಘಾಮಠದ ಮಠಾಧೀಶರಾದ ಶ್ರೀ ಶಿವಮೂರ್ತಿ ಮುರುಘಾ ಶರಣರ ಕುರಿತಾದ ಮಾಧ್ಯಮ ವರದಿಗಳಿಂದ ತಿಳಿದು ನಾನು ಹೆಚ್ಚು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀ 4 ದಿನ ಪೊಲೀಸ್ ಕಸ್ಟಡಿಗೆ
Advertisement
ಮಕ್ಕಳ ಮೇಲೆ ಎಸಗಿದ ಈ ಅಪರಾಧಗಳನ್ನು ಖಂಡಿಸಲು ಪದಗಳು ಸಾಲುತ್ತಿಲ್ಲ. ಈ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿಗಳ ಬೆಂಬಲಕ್ಕೆ ನಾನಿದ್ದೇನೆ. 2017 ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿ ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ. ಬಹುಮಾನದ ಮೊತ್ತವನ್ನು ಚೆಕ್ ಮೂಲಕ ಹಿಂದಿರುಗಿಸುತ್ತೇನೆ.
Advertisement
ಈ ಪ್ರಕರಣವನ್ನು ಬೆಳಕಿಗೆ ತಂದ ಮೈಸೂರು ಮೂಲದ ಸರ್ಕಾರೇತರ ʼಒಡನಾಡಿʼ ಸಂಸ್ಥೆಯ ಪ್ರಯತ್ನ ಮತ್ತು ಅದರ ಸಾಮಾಜಿಕ ಅನಿಷ್ಟಗಳ ವಿರುದ್ಧ ದಶಕಗಳ ಹೋರಾಟದ ಬಗ್ಗೆ ನಾನು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕು ಮತ್ತು ಯಾವುದೇ ಕಾರಣಕ್ಕೂ ರಾಜಿಯಾಗಲು ಅವಕಾಶ ನೀಡದಂತೆ ಸರ್ಕಾರಕ್ಕೆ ನಾನು ಮನವಿ ಮಾಡುತ್ತಿದ್ದೇನೆ.