ಯಶ್ ತಾಯಿ ನಿರ್ಮಾಣದ ʻಕೊತ್ತಲವಾಡಿʼ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

Public TV
1 Min Read
Kothalavadi Pruthvi Ambaar

ಯಶ್ (Yash) ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arunkumar) ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಸಿನಿಮಾದ ಟೀಸರ್‌ ಪ್ರೇಕ್ಷಕ ವಲಯದಿಂದ ಭರಪೂರ ಮೆಚ್ಚುಗೆ ಪಡೆದುಕೊಂಡಿದೆ. ಇದೀಗ ಚಿತ್ರತಂಡ ಕೊತ್ತಲವಾಡಿ ಟೈಟಲ್ ಟ್ರ್ಯಾಕ್ (Kothalavadi Title Track) ಅನಾವರಣ ಮಾಡಿದೆ.

ಕಿನ್ನಾಲ್ ರಾಜ್ ಸಾಹಿತ್ಯ ಬರೆದಿರುವ ಗೀತೆಗೆ ವ್ಯಾಸರಾಜ್ ಸೋಸಲೆ ಕಂಠ ಕುಣಿಸಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ಹಾಡಿನ ತೂಕ ಹೆಚ್ಚಿಸಿದೆ. ನಾಯಕನ ಶೌರ್ಯವನ್ನು ವರ್ಣಿಸುವ ಹಾಡು ಸಖತ್ ಪವರ್ ಫುಲ್ ಆಗಿ ಮೂಡಿ ಬಂದಿದೆ. ಇದನ್ನೂ ಓದಿ: ದರ್ಶನ್‌ಗೆ ಮಾದರಿಯಾದ ಸಂಜು ಬಸಯ್ಯ – ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸಿದವನಿಗೆ ಬುದ್ಧಿ ಹೇಳಿದ ನಟ

Kothalavadi Pruthvi Ambaar 2

ಪುಷ್ಪ ಅರುಣ್ ಕುಮಾರ್ ತಮ್ಮದೇ PA ಪ್ರೊಡಕ್ಷನ್ (PA Productions) ನಡಿ ಕೊತ್ತಲವಾಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಯುವ ಪ್ರತಿಭೆ ಶ್ರೀರಾಜ್ ಆಕ್ಷನ್ ಕಟ್ ಹೇಳಿದ್ದು, ಪೃಥ್ವಿ ಅಂಬರ್ (Pruthvi Ambaar) ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

Kothalavadi Pruthvi Ambaar 03

ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಇದನ್ನೂ ಓದಿ: ಬಾಹುಬಲಿಗೆ ದಶಕದ ಸಂಭ್ರಮ: ಗುಡ್‌ನ್ಯೂಸ್ ಕೊಟ್ಟ ಜಕ್ಕಣ್ಣ

Share This Article