ಬೆಂಗಳೂರು: ಪಾದರಾಯನಪುರದ 50 ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಗುಂಪು ಗುಂಪಾಗಿ ಕರ್ತವ್ಯ ನಿರತ ಪೊಲೀಸರ ಮೇಲೆ ಪಾದರಾಯನಪುರದ ಪುಂಡರು ಹಲ್ಲೆ ನಡೆಸಿದ್ದರು. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಚೆಕ್‍ಪೋಸ್ಟ್ ಧ್ವಂಸಗೊಳಿಸಿದ್ದರು. ಸ್ಥಳದಲ್ಲಿ ಕೆಲ ಪೊಲೀಸರು ಇದಿದ್ದರಿಂದ ಪುಂಡರ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದರು.
ಕೊರೊನಾ ಸೋಂಕಿತರ ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಪುಂಡರ ಜೀವ ರಕ್ಷಣೆಗೆ ಬಂದವರ ಮೇಲೆಯೇ ದಾಳಿ ನಡೆಸಿದ್ದಾರೆ. ಘಟನೆ ವಿಕೋಪ ತಿರುಗುತ್ತಿದ್ದಂತೆ ಪಾದರಾಯನಪುರಕ್ಕೆ ಪೊಲೀಸರ ನಿಯೋಗವೇ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಕರ್ತವ್ಯನಿರತ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಸುಮಾರು 50 ಜನರನ್ನು ರಾತ್ರಿಯೇ ಪೊಲೀಸರು ಬಂಧಿಸಿ ಆಡುಗೋಡಿ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ.
ಮುಂಜಾಗ್ರತ ಕ್ರಮವಾಗಿ 10 ಕೆಎಸ್‍ಆರ್ ಪಿ ತುಕಡಿ ಮತ್ತು 220 ಪೊಲೀಸರನ್ನು ಪಾದರಾಯನಪುರದಲ್ಲಿ ನಿಯೋಜನೆ ಮಾಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೌಮೇಂದು ಮುಖರ್ಜಿ ಮೊಕ್ಕಾಂ ಹೂಡಿದ್ದಾರೆ.