ಪಾದರಾಯನಪುರ ಪುಂಡರನ್ನ ಬಂಧಿಸಿದ ಪೊಲೀಸರಿಗೆ ಕೊರೊನಾ ಆತಂಕ

Public TV
1 Min Read
Padarayanapur Police

ಬೆಂಗಳೂರು: ಪಾದರಾಯನಪುರ ಪುಂಡರನ್ನು ಬಂಧಿಸಿರುವ ಪೊಲೀಸರಿಗೆ ಇದೀಗ ಕೊರೊನಾ ಆತಂಕ ಶುರುವಾಗಿದೆ.

ಭಾನುವಾರ ಪಾದರಾಯನಪುರದ 58 ಮಂದಿ ಕೊರೊನಾ ಶಂಕಿತರನ್ನು ಬೇರೆಡೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ಈ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಕೊರೊನಾ ಸೋಂಕು ಶಂಕಿತರು ಭಾಗಿಯಾಗಿದ್ರು ಎನ್ನಲಾಗಿದ್ದು, ಪೊಲೀಸರಲ್ಲಿ ಆತಂಕ ಮನೆ ಮಾಡಿದೆ. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಬಳಿಕ ರಾತ್ರಿಯೇ 54 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

Padarayanapur Pundaru 2 copy

ಪುಂಡರ ಬಂಧನ ವೇಳೆ ಪೊಲೀಸರು ಅವರ ನೇರಸಂಪರ್ಕದಲ್ಲಿದ್ದರು. ಹಾಗಾಗಿ ನಮಗೆ ಕೊರೊನಾ ತಗುಲಿದೆಯಾ ಎಂಬ ಆತಂಕ ಪೊಲೀಸರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪಾದರಾಯನಪುರದಲ್ಲಿ ಕೆಲಸ ಮಾಡಿದ್ದ ಎಲ್ಲ ಸಿಬ್ಬಂದಿಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಕೊಂಡು ಮನೆಗೆ ತೆರಳುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಡ್ಯೂಟಿ ಮುಗಿದ ಬಳಿಕ ಸ್ಯಾನಿಟೈಸ್ ಮಾಡಿಕೊಳ್ಳದೇ ಮನೆಗಳಿಗೆ ತೆರಳಕೂಡದು ಎಂದು ಸೂಚಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *