ನವದೆಹಲಿ: ಸಾಲುಮರದ ತಿಮ್ಮಕ್ಕ ಸೇರಿದಂತೆ ಕರ್ನಾಟಕದ ಐವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೀಡುವ ಭಾರತ ರತ್ನ ಹಾಗೂ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಹೆಸರನ್ನು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದನ್ನು ಓದಿ: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಇಲ್ಲ – ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಗೌರವ
Advertisement
ಭಾರತದ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿರುವ ಪದ್ಮಶ್ರೀ ಪ್ರಶಸ್ತಿಗೆ ರಾಜ್ಯದ ಸಾಲುಮರದ ತಿಮ್ಮಕ್ಕ, ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ, ಪುರಾತತ್ವ ಶಾಸ್ತ್ರಜ್ಞೆ ಶಾರದಾ ಶ್ರೀನಿವಾಸ, ಸರೋದ್ ವಾದಕ ರಾಜೀವ್ ತಾರಾನಾಥ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ರೋಹಿಣಿ ಗೋಡಬೋಲೆ ಅವರು ಆಯ್ಕೆಯಾಗಿದ್ದಾರೆ.
Advertisement
Advertisement
ಪದ್ಮಶ್ರೀ ಹೊರತಾಗಿ ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗೆ ರಾಜ್ಯದ ಯಾವುದೇ ಸಾಧಕರು ಆಯ್ಕೆಯಾಗಿಲ್ಲ. ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನವು ಸಿದ್ದಗಂಗಾ ಶ್ರೀಗಳಿಗೆ ನೀಡಲಿಲ್ಲವೆಂದು ಅನೇಕರು ಅಸಮಾಧನ ಹೊರಹಾಕಿದ್ದಾರೆ.
Advertisement
ಈ ಬಾರಿ ನಾಲ್ವರು ಪದ್ಮವಿಭೂಷಣ, 14 ಜನ ಸಾಧಕರು ಪದ್ಮಭೂಷಣ ಹಾಗೂ 94 ಜನರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಾಳೆ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv