ಬೆಂಗಳೂರು: ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಪದ್ಮ ವಿಭೂಷಣ ಪ್ರಶಸ್ತಿ (Padma Vibhushan Award) ಬಂದಿರುವುದು ಬಯಸದೇ ಬಂದ ಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಸಂತಸ ವ್ಯಕ್ತಪಡಿಸಿದರು.
ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ ಅವರು ಪಬ್ಲಿಕ್ ಟಿವಿ (Public TV) ಜೊತೆ ಮಾತನಾಡಿ ಸಂತಸ ಹಂಚಿಕೊಂಡಿದ್ದಾರೆ. ಪದ್ಮ ವಿಭೂಷಣ ಘೋಷಣೆಯಾಗಿರುವುದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಹೇಳಿದರು.
Advertisement
Advertisement
ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ ಮತ್ತೆ ನನ್ನ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಇದು ನನಗೆ ಬಹಳ ಸಂತೋಷವಾಗಿದೆ. ನನ್ನ ರಾಜಕೀಯ ನಿವೃತ್ತಿಯೊಂದಿಗೆ ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ. ಪ್ರಶಸ್ತಿಯ ಆಯ್ಕೆಯ ಮಾನದಂಡ ಆಯಾ ಕಾಲಘಟ್ಟದಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಲ್ಲಿ ಟಾರ್ಗೆಟ್ ಡಿಕೆಶಿ, ಇಲ್ಲಿ ಟಾರ್ಗೆಟ್ ಸಿದ್ದರಾಮಯ್ಯ- ಏನಿದು ಬಿಜೆಪಿ ತಂತ್ರ?
Advertisement
Advertisement
ಇತ್ತೀಚೆಗಷ್ಟೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ. ಅದರ ಸಮೀಪದಲ್ಲೇ ಈ ಪ್ರಶಸ್ತಿ ಬಂದಿದೆ. ನನಗೆ ಬಹಳ ಸಂತೋಷ ಉಂಟುಮಾಡಿದೆ. 6 ದಶಕಗಳಿಂದ ರಾಜಕೀಯವಾಗಿ ಸಾಕಿ, ಸಲಹಿ, ಆಶೀರ್ವಾದ ಮಾಡಿದ ಕನ್ನಡದ 7 ಕೋಟಿ ಜನರಿಗೆ ನಮ್ರತೆಯಿಂದ ಸಮರ್ಪಣೆ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: 74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k