– ಟೆನಿಸ್ ದಂತಕಥೆ ವಿಜಯ್ ಅಮೃತರಾಜ್‌ಗೆ ಪದ್ಮವಿಭೂಷಣ ಪ್ರದಾನ ಮಾಡಿದ ರಾಷ್ಟ್ರಪತಿ
ನವದೆಹಲಿ: ಟೆನಿಸ್ ದಂತಕಥೆ ವಿಜಯ್ ಅಮೃತರಾಜ್, ಮಲಯಾಳಂ ಖ್ಯಾತ ನಟ ಮಮ್ಮುಟ್ಟಿ (Mammootty), ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu)) ಅವರು ಇಂದು ಪದ್ಮಭೂಷಣ (Padma Bhushan) ಪ್ರಶಸ್ತಿ ಪ್ರದಾನ ಮಾಡಿದರು.
ಎರಡನೇ ಸುತ್ತಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿನಿಮಾ, ಸಂಗೀತ, ಸಾರ್ವಜನಿಕ ಸೇವೆ ಮತ್ತು ಕಲೆಗಳಂತಹ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಗಳಿಗಾಗಿ ಹಲವಾರು ಗಣ್ಯ ವ್ಯಕ್ತಿಗಳನ್ನು ರಾಷ್ಟ್ರಪತಿಗಳು ಸನ್ಮಾನಿಸಿದ್ದಾರೆ. ಸಮಾರಂಭದಲ್ಲಿ ನಟ ಮಮ್ಮುಟ್ಟಿ ಅವರ ಪತ್ನಿ ಸಲ್ಫತ್, ಮಗ ಮತ್ತು ನಟ ದುಲ್ಕರ್ ಸಲ್ಮಾನ್, ಮಗಳು ಸುರುಮಿ ಭಾಗವಹಿಸಿದ್ದರು. ಇದನ್ನೂ ಓದಿ: ಸಿಎಂ ವಿಜಯ್‌ಗಿಲ್ಲ ಬರ್ತ್‌ಡೇ ವಿಶ್, ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ತ್ರಿಷಾ
#WATCH | Delhi | Malayalam cinema legend Mammootty awarded the Padma Bhushan by President Droupadi Murmu
(Video source: Rashtrapati Bhavan) pic.twitter.com/XXCPOyG4pS
— ANI (@ANI) June 23, 2026
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಬಾಲಿವುಡ್ ನಟ ಆರ್.ಮಾಧವನ್‌ಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು.
ರಂಗ ಕಲಾವಿದ ನೂರುದ್ದೀನ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೆಎಂಎಂ ಕುಲಪತಿ ಮತ್ತು ಬುಡಕಟ್ಟು ನಾಯಕ ಶಿಬು ಸೊರೆನ್ ಅವರಿಗೆ ಸಾರ್ವಜನಿಕ ವ್ಯವಹಾರಗಳ ಕ್ಷೇತ್ರದಲ್ಲಿ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯನ್ನು ಅವರ ಪತ್ನಿ ರೂಪಿ ಸೊರೇನ್ ಸ್ವೀಕರಿಸಿದರು.
ಮೇ 26 ರಂದು ನಡೆದ ಮೊದಲ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ರಾಷ್ಟ್ರಪತಿಗಳು ಒಟ್ಟು 66 ಪದ್ಮ ಪ್ರಶಸ್ತಿಗಳನ್ನು ವಿಜೇತರಿಗೆ ಪ್ರದಾನ ಮಾಡಿದ್ದರು. ಆ ಕಾರ್ಯಕ್ರಮದಲ್ಲಿ ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪತ್ನಿ, ನಟಿ-ರಾಜಕಾರಣಿ ಹೇಮಾ ಮಾಲಿನಿ ಅವರು ಪತಿ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಇದನ್ನೂ ಓದಿ: ಲಾಯರ್ ಬದಲಿಸಿದ ಬೆನ್ನಲ್ಲೇ ಸುಪ್ರೀಂಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ ದರ್ಶನ್
