ಮಂಡ್ಯ: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ (Subbanna Ayyappan) ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಶವ ಶ್ರೀರಂಗಪಟ್ಟಣದ (Srirangapatna) ಸಾಯಿ ಆಶ್ರಮದ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೇ 7ರಂದು ಅವರು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಮೈಸೂರಿನ (Mysuru) ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದರು. ಇದನ್ನೂ ಓದಿ: ನಾವೆಂದು ಹಿಂದೂಸ್ತಾನದ ಜೊತೆಗಿರುತ್ತೇವೆ – ಮಂಡ್ಯದಲ್ಲಿ ಮುಸ್ಲಿಮರಿಂದ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ
ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ಶವ ಮೇಲೆತ್ತಿಸಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ ಅವರ ಸ್ಕೂಟರ್ ಪತ್ತೆಯಾಗಿದೆ.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ – 37 ಲಕ್ಷ ಕಳೆದುಕೊಂಡ ಮಾಜಿ ನೌಕರ!