ಮುಂಬೈ: ಖ್ಯಾತ ಖಗೋಳ ತಜ್ಞ(Astronomer), ವಿಜ್ಞಾನ ಸಂವಹನಕಾರ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಜಯಂತ್ ನಾರ್ಲಿಕರ್ ಮಂಗಳವಾರ ಪುಣೆಯಲ್ಲಿ ನಿಧನರಾಗಿದ್ದಾರೆ. ಜಯಂತ್ ನಾರ್ಲಿಕರ್(Jayant Narlikar) ಅವರಿಗೆ 87 ವರ್ಷ ವಯಸಾಗಿತ್ತು. ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಯೊಂದಕ್ಕೆ ಒಳಗಾಗಿದ್ದರು.
`ಬಿಗ್ ಬ್ಯಾಂಗ್’ ಸಿದ್ಧಾಂತಕ್ಕೆ ಪರ್ಯಾಯಗಳನ್ನು ಪ್ರಸ್ತಾಪಿಸಿದ್ದಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಭಾರತದಲ್ಲಿ ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಸಂಶೋಧನೆಯ ವಿಶ್ವ ದರ್ಜೆಯ ಸಂಸ್ಥೆಗಳನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ನಾರ್ಲಿಕರ್ ಅವರು ಆಗಾಧ ಕೊಡುಗೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಸಿವಿಲ್ ನ್ಯಾಯಾಧೀಶ ಸ್ಥಾನಕ್ಕೆ ನೇಮಕಾತಿಯಾಗಲು ಕನಿಷ್ಠ ಮೂರು ವರ್ಷಗಳ ವಕೀಲಿಕಿ ಅನುಭವ ಕಡ್ಡಾಯ: ಸುಪ್ರೀಂ
ನಾರ್ಲಿಕರ್ ಅವರು ಜುಲೈ 19, 1938ರಂದು ಮಹಾರಾಷ್ಟ್ರದ(Maharashtra) ಕೊಲ್ಲಾಪುರದಲ್ಲಿ ಜನಿಸಿದ್ದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ನಾರ್ಲಿಕರ್ ಅವರ ತಂದೆ ವಿಷ್ಣು ವಾಸುದೇವ ನಾರ್ಲಿಕರ್(Vishnu Vasudeva Narlikar) ಅದೇ ವಿಶ್ವವಿದ್ಯಾಲಯದಲ್ಲಿ ಗಣಿತ ಪ್ರಾಧ್ಯಾಪಕರಾಗಿದ್ದರು. ಬಳಿಕ ನಾರ್ಲಿಕರ್ ಅವರು ಉನ್ನತ ವಿದ್ಯಾಭ್ಯಾಸಕ್ಕಾಗಿ ಕೇಂಬ್ರಿಡ್ಜ್‌ಗೆ ತೆರಳಿದ್ದರು. ಇದನ್ನೂ ಓದಿ: ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ: ರಾಹುಲ್ ಗಾಂಧಿ
ನಾರ್ಲಿಕರ್ ಅವರು ಟಾಟಾ ಇನ್ಸಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ಗೆ ಸೇರುವ ಉದ್ದೇಶದಿಂದ ಭಾರತಕ್ಕೆ ಮರಳಿದ್ದರು. 1988ರಿಂದ 2003ರವರೆಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಪ್ರಸ್ತಾವಿತ ಅಂತರ ವಿಶ್ವವಿದ್ಯಾಲಯ ಖಗೋಳವಿಜ್ಞಾನ ಮತ್ತು ಆಸ್ಟೋಫಿಸಿಕ್ಸ್ ಕೇಂದ್ರದಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಅಮೃತಸರದ ಸ್ವರ್ಣ ಮಂದಿರದ ಆವರಣದೊಳಗೆ ವಾಯು ರಕ್ಷಣಾ ವ್ಯವಸ್ಥೆ ನಿಯೋಜನೆ
ನಾರ್ಲಿಕರ್ ಅವರಿಗೆ 26 ವರ್ಷ ವಯಸ್ಸಿನಲ್ಲೇ ಪದ್ಮಭೂಷಣ, 2004ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಲಭಿಸಿತ್ತು. 2011ರಲ್ಲಿ, ಮಹಾರಾಷ್ಟ್ರ ಸರ್ಕಾರವು ನಾರ್ಲಿಕರ್ ಅವರಿಗೆ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ಮಹಾರಾಷ್ಟ್ರ ಭೂಷಣ ನೀಡಿ ಗೌರವಿಸಿತ್ತು.