ಮುಂಬೈ: ಖ್ಯಾತ ಇತಿಹಾಸಕಾರ-ಲೇಖಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ್ ಪುರಂದರೆ(99) ಅವರು ಇಂದು ವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ನ್ಯುಮೋನಿಯಾಗೆ ಒಳಗಾಗಿದ್ದ ಬಾಬಾಸಾಹೇಬ್ ಅವರು ಪುಣೆಯ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಇಂದು ಬೆಳಗ್ಗೆ 10.30ರ ಸುಮಾರಿಗೆ ಪುಣೆಯ ವೈಕುಂಠ ಚಿತಾಗಾರದಲ್ಲಿ ಬಾಬಾಸಾಹೇಬ್ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ
Advertisement
Advertisement
ಬಾಬಾಸಾಹೇಬ್ ಪುರಂದರೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಬಾಬಾಸಾಹೇಬ್ ಪುರಂದರೆ ಅವರೊಂದಿಗೆ ಮೋದಿ ಅವರು ಕುಳಿತುಕೊಂಡು ಮಾತನಾಡುತ್ತಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಆಗುತ್ತಿರುವ ನೋವನ್ನು ಪದಗಳಲ್ಲಿ ಹೇಳಲಾಗುತ್ತಿಲ್ಲ. ಶಿವಶಾಹಿರ್ ಬಾಬಾಸಾಹೇಬ್ ಪುರಂದರೆಯವರ ನಿಧನವು ಇತಿಹಾಸ ಮತ್ತು ಸಂಸ್ಕೃತಿಕ ಜಗತ್ತಿನಲ್ಲಿ ದೊಡ್ಡ ಶೂನ್ಯವನ್ನು ಉಂಟುಮಾಡಿದೆ. ಮುಂಬರುವ ಪೀಳಿಗೆಯವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ತಿಳಿಸಿದಕ್ಕೆ ಅವರಿಗೆ ಧನ್ಯವಾದಗಳು. ಅವರ ಇತರ ಕೃತಿಗಳು ಸಹ ನೆನಪಿನಲ್ಲಿ ಉಳಿಯುತ್ತವೆ.
Advertisement
PM Narendra Modi extends his condolences on the demise of Shivshahir Babasaheb Purandare. “I am pained beyond words,” he tweets pic.twitter.com/V4gGV8U9bz
— ANI (@ANI) November 15, 2021
Advertisement
“ಶಿವಶಾಹಿರ್ ಬಾಬಾಸಾಹೇಬ್ ಪುರಂದರೆ ಅವರು ಪ್ರಜ್ಞಾವಂತರು ಮತ್ತು ಭಾರತೀಯ ಇತಿಹಾಸದ ಶ್ರೀಮಂತ ಜ್ಞಾನವನ್ನು ಹೊಂದಿದ್ದರು”. ಅವರ ವ್ಯಾಪಕ ಕಾರ್ಯಗಳು ಸದಾ ನೆನಪಿನಲ್ಲಿ ಉಳಿಯುತ್ತದೆ. ಈ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?
I am pained beyond words. The demise of Shivshahir Babasaheb Purandare leaves a major void in the world of history and culture. It is thanks to him that the coming generations will get further connected to Chhatrapati Shivaji Maharaj. His other works will also be remembered. pic.twitter.com/Ehu4NapPSL
— Narendra Modi (@narendramodi) November 15, 2021
ಮರಾಠಿಯಲ್ಲಿ ಶಿವಾಜಿ ಮಹಾರಾಜ್ ಕುರಿತಂತೆ ಪುರಂದರೆ ಅವರು ಎರಡು ಭಾಗಗಳಲ್ಲಿ ರಚಿಸಿರುವ 900 ಪುಟಗಳ ಕೃತಿ ರಾಜಾ ಶಿವಛತ್ರಪತಿ ಜನಪ್ರಿಯತೆ ಪಡೆದಿತ್ತು. ಮೊದಲ ಬಾರಿಗೆ 1950ರಲ್ಲಿ ಪ್ರಕಟಗೊಂಡ ಕೃತಿಯು ಈವರೆಗೂ ಹಲವು ಬಾರಿ ಮರುಮುದ್ರಣ ಕಂಡಿದೆ ಹಾಗೂ ಮರಾಠಿಗರ ಪ್ರತಿ ಮನೆಯಲ್ಲಿ ಸ್ಥಾನ ಪಡೆದಿದೆ. ಅಲ್ಲದೇ 1980ರಲ್ಲಿ ಶಿವಾಜಿ ಮಹಾರಾಜ್ ಅವರ ಜೀವನ ಆಧರಿಸಿ ಜಾಣತಾ ರಾಜ ನಾಟಕವನ್ನು ರಚಿಸಿ ನಿರ್ದೇಶಿಸಿದ್ದರು.