– ಅಲ್ಲಿ 2,000 ಜನರನ್ನ ಹೆಗಲಮೇಲೆ ಹೊತ್ಕೊಂಡು ಬಂದವರು ಮುಸ್ಲಿಮರೇ
– 2014ರಿಂದ ಆಗಿರುವ ಹಿಂದೂಗಳ ಸಾವಿನ ಹೊಣೆ ಕೇಂದ್ರವೇ ಹೊರಬೇಕೆಂದ ಸಚಿವ
ಬೆಂಗಳೂರು: ಕಳೆದ 11 ವರ್ಷಗಳಿಂದಲೂ ಕೇಂದ್ರ ಸರ್ಕಾರ ದಿನದ 24 ಗಂಟೆಯೂ ಮುಸ್ಲಿಂ.. ಮುಸ್ಲಿಂ.. ಮುಸ್ಲಿಂ.. ಅಂತ ಬೈಯೋದು ಬಿಟ್ರೆ ಬೇರೇನು ಮಾಡಿಲ್ಲ ಎಂದು ಸಚಿವ ಸಂತೋಷ್ ಲಾಡ್ (Santosh Lad) ಸಿಡಿಮಿಡಿಗೊಂಡಿದ್ದಾರೆ.
Pahalgam Terror Attack | ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ, ನೀವು ಹಿಂದೂಗಳನ್ನ ಕೊಂದಿರೋದು: ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕೆಂಡ https://t.co/uAkS6XsxQD#Pahalgam #Kashmir #PahalgamTerrorAttack #PMModi #AmitShah #Pakistan #SantoshLad pic.twitter.com/TGELPpCxBx
— PublicTV (@publictvnews) April 25, 2025
ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಜಿಕಲ್ ಸ್ಟ್ರೈಕ್ ಏನಾಯ್ತು? ಪುಲ್ವಾಮಾ ದಾಳಿ ಏನಾಯ್ತು? ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ, ನೀವು ಹಿಂದೂಗಳನ್ನ ಕೊಂದಿರೋದು. 2014ರಿಂದ ಆಗಿರುವ ಹಿಂದೂಗಳ ಹತ್ಯೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. 20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ (Hindu – Muslim) ಬಿಟ್ರೆ ಬೇರೆ ಏನೂ ಇಲ್ಲ. ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಇವರೇ ಆರ್ಟಿಕಲ್ 370 ರದ್ದು ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್‌ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ಬ್ಯೂಟಿಫುಲ್ ಆಗಿದ್ದಾರೆ. ಆದ್ರೆ ನಮಗಿಂತ ಹೆಚ್ಚಾಗಿ ಅಲ್ಲಿನ ಜನ ರಕ್ತ ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೇಗೆ ಬಂದೂಕು ಬಂತು, ಅವರು ಹೇಗೆ ಬಂದ್ರು ಅದರ ಬಗ್ಗೆ ಚರ್ಚೆ ಮಾಡ್ತಿಲ್ಲ ಎಂದು ಕಿಡಿ ಕಾರಿದರು.
ಕಳೆದ 11 ವರ್ಷಗಳಿಂದ ದಿನಬೆಳಗಾದ್ರೆ ಹಿಂದೂ ಮುಸ್ಲಿಂ ವಿಚಾರ ಬಿಟ್ಟರೆ ಬೇರೇನಿಲ್ಲ. ಅಲ್ಲಿ ಉಗ್ರರ ದಾಳಿಯಾದಾಗ 2000 ಪ್ರವಾಸಿಗರನ್ನು ಸ್ಥಳಾಂತರ ಮಾಡಿದ್ದು, ಅದೇ ಮುಸ್ಲಿಮರು. ಇನ್ನಾದ್ರೂ ಒಳ್ಳೆಯ ವಿಷಯಗಳ ಬಗ್ಗೆ ಚರ್ಚೆ ಮಾಡೋಣ ಅಂತ ಮನವಿ ಮಾಡಿದರು.
ಪಹಲ್ಗಾಮ್ ಘಟನೆ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ಪ್ರವಾಸಿಗರಿಗೆ ಆಗಿದ್ದು ಭಯಾನಕ ಘಟನೆ. ರಾಜಕೀಯ ಮಾತನಾಡಬಾರದು ಅಂದುಕೊಂಡಿದ್ದೇವೆ. ಆದರೆ ಕೆಲವಾರು ಪ್ರಶ್ನೆ ನಮ್ಮನ್ನ ಕಾಡುತ್ತಿವೆ. ಇಂತಹ ಘಟನೆಗಳು ನಡೆದಾಗ ಯಾವ ಕೇಂದ್ರ ಸಚಿವರೂ ಪ್ರತಿಕ್ರಿಯೆ ನೀಡಲ್ಲ. ನೇರವಾಗಿ ಬಂದು ಉತ್ತರ ಕೊಟ್ಟಿರೋದು ಬೆರಳೆಣಿಕೆಯಷ್ಟು ಸಚಿವರು ಮಾತ್ರ. ಕೇವಲ ಸ್ಟುಡಿಯೋಗಳಲ್ಲಿ ಪರ ವಿರೋಧ ಚರ್ಚೆಗಳು ಆಗ್ತಿವೆ. ಕೇಂದ್ರ ಸರ್ಕಾರದಲ್ಲಿ ಆದ ವೈಫಲ್ಯದ ಬಗ್ಗೆ ಯಾರೂ ಮಾತನಾಡ್ತಿಲ್ಲ. 2 ದಿನಗಳ ಬಳಿಕ ಕೇಂದ್ರ ಸರ್ಕಾರ ಭದ್ರತಾ ಲೋಪ ಆಗಿದೆ ಅಂತ ಒಪ್ಪಿಕೊಳ್ಳುವಷ್ಟರಲ್ಲಿ, ಆಗಬಾರದ್ದೆಲ್ಲ ಚರ್ಚೆ ಆಗಿ ಹೋಗಿತ್ತು ಎಂದು ಅಸಮಾಧಾನ ಹೊರಹಾಕಿದರು.
ಕೇಂದ್ರ ಗೃಹ ಸಚಿವರ ರಾಜೀನಾಮೆ ಯಾರೂ ಕೇಳ್ತಿಲ್ಲ. ನಮ್ಮ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆಕೇಳ್ತಿದ್ದಾರೆ. ಶ್ರೀನಗರದಲ್ಲಿ ಹೆಜ್ಜೆ ಹೆಜ್ಜೆಗೂ ಚೆಕ್‌ಪೋಸ್ಟ್ ಇದೆ. ಒಂದು ಹುಳನೂ ತಪ್ಪಿಸಿಕೊಂಡು ಹೋಗೋಕೆ ಆಗಲ್ಲ. ಗೃಹ ಸಚಿವರನ್ನ ಕೇಳ್ತೇನೆ, ದಾಳಿ ನಡೆದಾಗ ಯಾಕೆ ಒಬ್ಬ ಸೆಕ್ಯೂರಿಟಿನೂ ಇಲ್ಲ ಯಾಕೆ..? ಇದರ ಬಗ್ಗೆ ಚರ್ಚೆ ಆಗಬೇಕೇ ವಿನಃ ಬೇರೆಯದ್ದಕ್ಕಲ್ಲ. ಮಾತಿಗೆ ಮುನ್ನ ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂ-ಮುಸ್ಲಿಂ ಅಂತಾರೆ. ಹಾಗಾದ್ರೆ ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ. ಇಂತಹ ದೊಡ್ಡ ಘಟನೆ ನಡೆದರೂ ಪ್ರಧಾನಿ ಮೋದಿ ಬಿಹಾರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸ್ತಾರೆ ಅಂತ ಕೇಂದ್ರದ ವಿರುದ್ಧ ಹರಿಹಾಯ್ದರು.