– ಲಷ್ಕರ್ ಉಗ್ರ ಸಂಘಟನೆ ಬೆಂಬಲವಿಲ್ಲದೇ ಇದೆಲ್ಲ ಸಾಧ್ಯವೇ ಇಲ್ಲವೆಂದ ಭದ್ರತಾ ಮಂಡಳಿ
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC – ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಹೊಣೆಯನ್ನ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಲಾಗಿದೆ.
ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನ ಟಿಆರ್‌ಎಫ್ ತನ್ನ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ತಿಳಿಸಿದೆ. ಅಲ್ಲದೇ ಟಿಆರ್‌ಎಫ್‌ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್
ಸಂಘಟನೆಯು ದಾಳಿಯ ಫೋಟೊಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನ ಖಚಿತಪಡಿಸಲ ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನ ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್‌ಎಸ್‌ಸಿ ಗಮನಿಸಿದೆ. ಇದರೊಂದಿಗೆ ಟಿಆರ್‌ಎಫ್‌ನ ಈ ಕೃತ್ಯವು ಸ್ಥಳೀಯ ಜನತೆ ಮತ್ತು ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್
ಯುಎನ್‌ಎಸ್‌ಸಿ ತನ್ನ ವರದಿಯಲ್ಲಿ, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಅಂತಾರಾಷ್ಟ್ರೀಯ ಸಹಕಾರವನ್ನ ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿದೆ. ಟಿಆರ್‌ಎಫ್ ನಂತಹ ಗುಂಪುಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವುದರಿಂದ, ಇದನ್ನು ತಡೆಗಟ್ಟಲು ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ವರದಿಯು ಸೂಚಿಸಿದೆ. ಜೊತೆಗೆ, ಭಯೋತ್ಪಾದಕ ಗುಂಪುಗಳಿಗೆ ಆರ್ಥಿಕ ಸಹಾಯ, ಶಸ್ತ್ರಾಸ್ತ್ರ ಸರಬರಾಜು ಮತ್ತು ತರಬೇತಿಯನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕೆಂದು ಯುಎನ್‌ಎಸ್‌ಸಿ ಒತ್ತಾಯಿಸಿದೆ. ಇದನ್ನೂ ಓದಿ: ಇಂದಿರಾಗಾಂಧಿಯ ಅರ್ಧದಷ್ಟು ಧೈರ್ಯ ಇದ್ರೆ ಟ್ರಂಪ್ ಸುಳ್ಳುಗಾರ ಎಂದು ಮೋದಿ ಹೇಳಲಿ: ರಾಹುಲ್ ಗಾಂಧಿ ಸವಾಲ್