LatestMain PostNational

ಹುತಾತ್ಮ ಯೋಧರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಲೆಫ್ಟಿನೆಂಟ್ ಗವರ್ನರ್

ಶ್ರೀನಗರ: ನಿನ್ನೆ ನಡೆದ ದುರ್ಘಟನೆಯಲ್ಲಿ ಹುತಾತ್ಮರಾದ ಐಟಿಬಿಪಿ ಯೋಧರ ಪುಷ್ಪಾರ್ಚನೆ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾಗವಹಿಸಿ ಯೋಧರ ಪಾರ್ಥಿವ ಶರೀರದ ಶವ ಪಟ್ಟಿಗೆಗೆ ಹೆಗಲು ನೀಡುವ ಮೂಲಕ ತಮ್ಮ ಅಂತಿಮ ನಮನವನ್ನು ಸಲ್ಲಿಸಿದರು.

ನಿನ್ನೆ ಕಾಶ್ಮೀರದ ಪಹಲ್ಗಾಮ್‍ನ ಫ್ರಿಸ್ಲಾನ್‍ನಲ್ಲಿ ಐಟಿಬಿಪಿ ಮತ್ತು ಜಮ್ಮು ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ನದಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಐಟಿಬಿಪಿ ಸಿಬ್ಬಂದಿ ಹುತಾತ್ಮರಾಗಿದ್ದರು.

ಅಮರನಾಥ ಯಾತ್ರೆ ಪ್ರದೇಶದಲ್ಲಿ ಭದ್ರತೆಗಾಗಿ ನಿಯೋಜಿಸಿದ್ದ 37 ಐಟಿಬಿಪಿ, ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಕರೆದೊಯ್ಯುಲಾಗುತ್ತಿತ್ತು. ಈ ಸಂದರ್ಭದಲ್ಲಿ ಘಟನೆ ನಡೆದಿದ್ದು, ಇನ್ನು ಹಲವು ಸಿಬ್ಬಂದಿಗಳು ಗಾಯಗಳಾಗಿತ್ತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮೃತ ದಲಿತ ಬಾಲಕನ ಕುಟುಂಬದವರನ್ನು ಭೇಟಿಯಾಗಲು ಹೊರಟಿದ್ದ ಚಂದ್ರಶೇಖರ್‌ ಆಜಾದ್‌ ಬಂಧನ

ಅಪಘಾತದ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತ ಐಟಿಬಿಪಿ ಸಿಬ್ಬಂದಿಯ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ದುರಂತ ಘಟನೆಯ ಬಗ್ಗೆ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಕೊರೊನಾ ಏರಿಕೆ – ವಿಮಾನ ಪ್ರಯಾಣದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ: ಡಿಜಿಸಿಎ

Live Tv

Leave a Reply

Your email address will not be published.

Back to top button