ಪಾಕ್‌ಗೆ ಸೇನಾ ಮಾಹಿತಿ ರವಾನೆ – ಇಬ್ಬರು ಅರೆಸ್ಟ್‌

Public TV
1 Min Read
jammu kashmir army

ನವದೆಹಲಿ: ಪಹಲ್ಗಾಮ್‌ನಲ್ಲಿ (Pahalgam Terror Attack) ಉಗ್ರರು ನರಮೇಧ ಮಾಡಿದ ಬಳಿಕವೂ ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಪರ ಕೆಲಸ ಮಾಡುತ್ತಿದ ಇಬ್ಬರನ್ನು ಪಂಜಾಬ್‌ನ ಅಮೃತಸರ (Punjab Amritsar) ಪೊಲೀಸರು ಬಂಧಿಸಿದ್ದಾರೆ.

ಅಮೃತಸರ ಗ್ರಾಮೀಣ ಪೊಲೀಸರು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರು ಬಂಧಿಸಿದ್ದಾರೆ. ಆರೋಪಿಗಳು ಅಮೃತಸರದಲ್ಲಿರುವ ಸೇನಾ ಅಂಟಾನ್ಮೆಂಟ್ ಪ್ರದೇಶ, ವಾಯುನೆಲೆಗಳ ಸೂಕ್ಷ್ಮ ಮಿಲಿಟರಿ ಮಾಹಿತಿ ಮತ್ತು ಫೋಟೋಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಕಳುಹಿಸಿದ್ದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಎಚ್ಚರಿಸಿದ್ದ ಗುಪ್ತಚರ ಇಲಾಖೆ

 

ಶನಿವಾರ ಶೇರ್ ಮಾಸಿಹ್ ಮತ್ತು ಸೂರಜ್ ಮಾಸಿಹ್ ಬಂಧನ ಮಾಡಲಾಗಿದ್ದು ಸದ್ಯ ಇವರನ್ನು ಅಮೃತಸರ ಕೇಂದ್ರ ಜೈಲಿಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

 

ಪಂಜಾಬ್ ಡಿಜಿಪಿ ಗೌರವ್ ಯಾದವ್ ಪ್ರತಿಕ್ರಿಯಿಸಿ, ಪ್ರಾಥಮಿಕ ತನಿಖೆಯ ವೇಳೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಜೊತೆ ಇವರು ಸಂಪರ್ಕ ಹೊಂದಿದ್ದರು. ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೀರ್ಘ ರಜೆ ಕೊಡಲ್ಲ – ಶಸ್ತ್ರಾಸ್ತ್ರ ಕಾರ್ಖಾನೆ ಉದ್ಯೋಗಿಗಳಿಗೆ ಸೂಚನೆ

Share This Article